ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ 2-3 ದಿನಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಕಂತಿನ ಹಣ ಖಾತೆಗೆ ಜಮೆ ಆಗಲಿದೆ.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗೃಹಲಕ್ಷ್ಮೀ DBT ಪ್ರಕ್ರಿಯೆ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಫಲಾನುಭವಿಗಳಿಗೆ ನಾಲ್ಕನೇ ಅನುದಾನದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ರಾಯಚೂರು ರವರ ಮೂಲಕ DBT ಪ್ರಕ್ರಿಯೆ ಚಾಲ್ತಿ ಮಾಡಲಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮಾವಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಪಾಮಯ್ಯ ಮುರಾರಿ ತಿಳಿಸಿರುತ್ತಾರೆ.









