ಬೆಳಗಾವಿ: ರಾಜ್ಯದ ಯಜಮಾನಿ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಗೃಹ ಲಕ್ಷ್ಮೀ ಯೋಜನೆಯ ಸೆಪ್ಟೆಂಬರ್ ತಿಂಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಹೊಸ ವರ್ಷಕ್ಕೂ ಮುನ್ನವೇ ಗೃಹ ಲಕ್ಷ್ಮೀ ಯೋಜನೆ ಹಣ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದೆ. ಆ ಮೂಲಕ ಹೊಸ ವರ್ಷಕ್ಕೂ ಮುನ್ನವೇ ಯಜಮಾನಿಯರಿಗೆ ಸಿಹಿಸುದ್ದಿ ನೀಡಲಾಗಿದೆ.
ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲೇ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ ಮಾಡಿರುವುದಾಗಿ ತಿಳಿಸಿದ್ದಾರೆ.
ಅಂದಹಾಗೇ ಡಿಸೆಂಬರ್.16ರಂದು ಆರ್ಥಿಕ ಇಲಾಖೆಯಿಂದ ಸೆಪ್ಟೆಂಬರ್ ತಿಂಗಳ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹೊಸ ವರ್ಷಕ್ಕೂ ಮುನ್ನವೇ ಗೃಹ ಲಕ್ಷ್ಮೀಯರ ಬ್ಯಾಂಕ್ ಖಾತೆಗೆ ಹಣವು ಜಮಾ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸೆಪ್ಟೆಂಬರ್ ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್, ನವೆಂಬರ್, ಡಿಸೆಂಬರ್ ಹಣ ಬರಬೇಕಿದೆ. ಅದು ಯಾವಾಗ ಜಮಾ ಆಗಲಿದೋ ಎನ್ನುವ ಚಿಂತೆಯಲ್ಲಿ ಯಜಮಾನಿಯರಿದ್ದಾರೆ.
ನಾಳೆ ವಿವಿಧ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಕೆಇಎಯಿಂದ ಸ್ಪರ್ಧಾತ್ಮಕ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ








