ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕ್ಯಾನ್ಸರ್ ಚಿಕಿತ್ಸೆಗೆ 2 ಲಕ್ಷ ರೂ.ವರೆಗೆ ವೈದ್ಯಕೀಯ ಚಿಕಿತ್ಸೆ ಕಲ್ಪಿಸಲು ಸರ್ಕಾರ ಮುಂದಾಗಿದೆ.
ಹೌದು, ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಜತೆಗೆ ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಮತ್ತು ಅವರ ಪತಿ/ಪತ್ನಿಗೆ 1 ಲಕ್ಷದಿಂದ 2 ಲಕ್ಷ ರೂ.ವರೆಗಿನ ಸೌಲಭ್ಯವನ್ನು ಆರೋಗ್ಯ ಸೇವೆಯಡಿ ಸೇರ್ಪಡೆಗೊಳಿಸಿದೆ.
ಆರೋಗ್ಯ ಭಾಗ್ಯ ಯೋಜನೆಯಡಿ ಸಿಜಿಎಚ್ಎಸ್ ದರದಲ್ಲಿ ಚಿಕಿತ್ಸೆ ಒದಗಿಸಲು ಸರ್ಕಾರ ಸಾಮಾನ್ಯ ವೈದ್ಯಕೀಯ ಚಿಕಿತ್ಸೆಗೆ ಗರಿಷ್ಠ ಮಿತಿ 1 ವರ್ಷಕ್ಕೆ ಓರ್ವ ಸದಸ್ಯನ ಕುಟುಂಬಕ್ಕೆ 1 ಲಕ್ಷ ರೂ. ಸಿಗಲಿದೆ.








