ಬೆಂಗಳೂರು: ಪೊಲೀಸ್ ಸಿಬ್ಬಂದಿಗಳ ಹಿತಾದೃಷ್ಡಿಯಿಂದ ಆರೋಗ್ಯ ತಪಾಸಣಾ ವೆಚ್ಚವನ್ನು 1500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಂಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದಲ್ಲಿ ನೂತನವಾಗಿ ನಿರ್ಮಿಸಿರುವ ‘ಕೆಎಸ್‌ಆರ್‌ಪಿ ಸಮುದಾಯ ಭವನ ಉದ್ಘಾಟನಾ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ನ್ಯಾಯ ಒದಗಿಸುವುದರಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಇದೆ ಎಂದು ಹೈದ್ರಾಬಾದ್ ವಿಶ್ವವಿದ್ಯಾಲಯ ಹೇಳಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ನಮ್ಮ ಪೊಲೀಸರು ಪಾರಿತೋಷಕ ತಂದಿದ್ದಾರೆ ಎಂದು ಶ್ಲಾಘಿಸಿದರು.
ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್‌ನಲ್ಲಿ 10 ಲಕ್ಷ ಕೋಟಿ ರೂ. ಹೂಡಿಕೆ ಹರಿದು ಬಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವ್ಥೆ ಕೆಟ್ಟಿದ್ದರೆ ಇಷ್ಟೊಂದು ಹೂಡಿಕೆ ಬರುತ್ತಿರಲಿಲ್ಲ. ರಾಜ್ಯಕ್ಕೆ ಬಂಡಾವಾಳ ಹೂಡಿಕೆ ಬರುವಲ್ಲಿ, ನಿಮ್ಮ ಉತ್ತಮ ಕಾರ್ಯವೈಖರಿಯಿಂದ ಸಾಧ್ಯವಾಗಿದೆ ಎಂದರು.
ಸಿಎಂ ಅವರು ಬಜೆಟ್ ಸಿದ್ಧಪಡಿಸುವಾಗ, ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಬೇಡಿಕೆಗಳನ್ನು ಅವರ ಮುಂದಿಟ್ಟು ಸಾವಿರಾರು ಕೋಟಿ ರೂ. ಕೇಳುತ್ತೇನೆ. ಪೊಲೀಸ್ ವಸತಿ ಗೃಹ ಯೋಜನೆ, ಹೊಸ ವಾಹನಗಳ ಖರೀದಿ ಸೇರಿದಂತೆ ವಿವಿಧ ಕಾರ್ಯಗಳಿಗೆ 900 ಕೋಟಿ ರೂ. ಹೆಚ್ಚು ಹಣ ಕೊಟ್ಟಿದ್ದಾರೆ. ಪೊಲೀಸ್ ಇಲಾಖೆಗೆ ಎಂದಿಗೂ ನಿರಾಸೆ ಮಾಡಿಲ್ಲ ಎಂದು ಹೇಳಿದರು.
ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಭಾರತದ ಹೊಸ ಅಧ್ಯಾಯ: ಕೇಂದ್ರ ಸಚಿವ ಸಂಪುಟ ಶ್ಲಾಘನೆ