ಬೆಂಗಳೂರು : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರನ್ನು ಸರ್ಕಾರಿ ಪ್ರೌಢಶಾಲೆಗಳಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ-(2)ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು. ರವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿ.ಪಿ.ಇಡಿ. ಪದವಿ ಪಡೆದ ದೈಹಿಕ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯಾದ್ಯಂತ ಹಲವಾರು ಪ್ರೌಢಶಾಲಾ ದೈಹಿಕ ಶಿಕ್ಷಕರ ಗ್ರೇಡ್-1 ಹುದ್ದೆಗಳು ಖಾಲಿ ಇದ್ದು, ಆದ್ದರಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಬಿ.ಪಿ.ಎಡ್, ಪದವಿ ಪಡೆದ ದೈಹಿಕ ಶಿಕ್ಷಕರಿಗೆ ಸರ್ಕಾರದ ನಿಯಮಾನುಸಾರ ಪ್ರೌಢಶಾಲಾ ದೈಹಿಕ ಶಿಕ್ಷಕರೆಂದು ಗ್ರೇಡ್-1 ಹುದ್ದೆಗಳಿಗೆ ಬಡ್ತಿ ನೀಡುವಂತ ಕೋರಿರುತ್ತಾರೆ.
ಮುಂದುವರೆದು, ಉಲ್ಲೇಖಿತ-(1)ರ ಜ್ಞಾಪನ ಪತ್ರದಲ್ಲಿ ಈಗಾಗಲೇ ಬಿ.ಪಿ.ಎಡ್. ವಿದ್ಯಾರ್ಹತ ಹೊಂದಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಬಡ್ತಿ ನೀಡಲು ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಶೀಲಿಸಿ ಮುಂಬಡ್ತಿ ನೀಡಲು ಅಗತ್ಯ ಕ್ರಮವಹಿಸಲು ಸೂಚಿಸಲಾಗಿರುತ್ತದೆ.
ಉಲ್ಲೇಖಿತ (2)ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ರವರು ಕೋರಿರುವಂತೆ ಉಲ್ಲೇಖ (1)ರ ಪತ್ರದಲ್ಲಿ ಈಗಾಗಲೇ ಸೂಚಿಸಿರುವಂತೆ ಕೂಡಲೇ ಕ್ರಮವಹಿಸಿ ಹಾಗೂ ಕೈಗೊಂಡ ಕ್ರಮದ ಬಗ್ಗೆ ತುರ್ತಾಗಿ ವರದಿ ಸಲ್ಲಿಸಲು ಮರು ಆದೇಶಿಸಿದೆ.









