ಬೆಳಗಾವಿ ಸುವರ್ಣಸೌಧ: ರಾಜ್ಯದ ಗ್ರಾಮ ಪಂಚಾಯ್ತಿ ಗ್ರಂಥಾಲಯ, ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ ಮಾಡುವುದಾಗಿ ಹೇಳಿ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್ ನೀಡಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಲಿಖಿತ ಉತ್ತರ ನೀಡಿದರು.
ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ಮಾಹೆಯಲ್ಲಿ ನಿರ್ದೇಶನ ನೀಡಲಾಗಿದೆ. ಅದರಂತೆ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದೆ.
ಕೆಲವು ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ಬೇಡಿಕೆ ಕಡಿಮೆ ಇರುವುದರಿಂದ ಗ್ರಂಥಾಲಯ ಮೇಲ್ವಿಚಾರಕರಿಗೆ ವೇತನ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಕೊರತೆ ಇರುವುದರಿಂದ ಅಂತಹ ಜಿಲ್ಲೆಗಳಲ್ಲಿ ಬಾಕಿ ವೇತನವನ್ನು ಪಾವತಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ.
ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಗೆ ಸಂಬಂಧಿಸಿದಂತೆ 2025-26 ನೇ ಸಾಲಿನಲ್ಲಿ ಮಾರ್ಚ್ 2025 ರಿಂದ ನವೆಂಬರ್ 2025ರವರೆಗೆ 03 ತ್ರೈಮಾಸಿಕ ಕಂತುಗಳಲ್ಲಿ ಒಟ್ಟು ರೂ.60,49,75,549 ಗಳ ಗೌರವ ಧನವನ್ನು ನೇರವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಬಿಡುಗಡೆ ಮಾಡಲಾಗಿರುತ್ತದೆ.
ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!








