Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ `ಗ್ರಾಮ ಪಂಚಾಯಿತಿಗಳು’ ಸಾರ್ವಜನಿಕರಿಗೆ ಈ 30 ಮಾಹಿತಿಗಳನ್ನು ನೀಡುವುದು ಕಡ್ಡಾಯ.!

​ಪ್ರಾಣಿಗಳಲ್ಲೂ ಕಾಮದ ಸೆಳೆತ: ಪಕ್ಷಿ ಸೇರಿದಂತೆ ಹಲವು ಪ್ರಾಣಿಗಳಲ್ಲಿ ಹಸ್ತಮೈಥುನ ಸಾಮಾನ್ಯ ಎಂದು ಹೊಸ ಅಧ್ಯಯನ ಬಹಿರಂಗ!

BREAKING : ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಕು : ಡಿವೋರ್ಸ್ ಗೆ ಮೊರೆ ಹೋದ ದಂಪತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಊಟ, ವಸತಿ ಸಹಿತ `ಟಿವಿ ರಿಪೇರಿ’ ಉಚಿತ ತರಬೇತಿಗೆ ಅರ್ಜಿ ಆಹ್ವಾನ!
KARNATAKA

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಊಟ, ವಸತಿ ಸಹಿತ `ಟಿವಿ ರಿಪೇರಿ’ ಉಚಿತ ತರಬೇತಿಗೆ ಅರ್ಜಿ ಆಹ್ವಾನ!

By kannadanewsnow57

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.

ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4K, ಟಿವಿ LED ಮತ್ತು LCD ಟಿವಿ ಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ನವೆಂಬರ್ 20 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for the unemployed: Application invitation for free training in ``TV repair'' with food and accommodation!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ `ಗ್ರಾಮ ಪಂಚಾಯಿತಿಗಳು’ ಸಾರ್ವಜನಿಕರಿಗೆ ಈ 30 ಮಾಹಿತಿಗಳನ್ನು ನೀಡುವುದು ಕಡ್ಡಾಯ.!

2 Mins Read

BREAKING : ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಕು : ಡಿವೋರ್ಸ್ ಗೆ ಮೊರೆ ಹೋದ ದಂಪತಿ!

2 Mins Read

SHOCKING : ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಪತಿ ಸಾವಿನ ಖಿನ್ನತೆಯಿಂದ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ.!

1 Min Read
Recent News

BIG NEWS : ರಾಜ್ಯದ `ಗ್ರಾಮ ಪಂಚಾಯಿತಿಗಳು’ ಸಾರ್ವಜನಿಕರಿಗೆ ಈ 30 ಮಾಹಿತಿಗಳನ್ನು ನೀಡುವುದು ಕಡ್ಡಾಯ.!

​ಪ್ರಾಣಿಗಳಲ್ಲೂ ಕಾಮದ ಸೆಳೆತ: ಪಕ್ಷಿ ಸೇರಿದಂತೆ ಹಲವು ಪ್ರಾಣಿಗಳಲ್ಲಿ ಹಸ್ತಮೈಥುನ ಸಾಮಾನ್ಯ ಎಂದು ಹೊಸ ಅಧ್ಯಯನ ಬಹಿರಂಗ!

BREAKING : ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಕು : ಡಿವೋರ್ಸ್ ಗೆ ಮೊರೆ ಹೋದ ದಂಪತಿ!

SHOCKING : ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಪತಿ ಸಾವಿನ ಖಿನ್ನತೆಯಿಂದ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ.!

State News
KARNATAKA

BIG NEWS : ರಾಜ್ಯದ `ಗ್ರಾಮ ಪಂಚಾಯಿತಿಗಳು’ ಸಾರ್ವಜನಿಕರಿಗೆ ಈ 30 ಮಾಹಿತಿಗಳನ್ನು ನೀಡುವುದು ಕಡ್ಡಾಯ.!

By kannadanewsnow57 KARNATAKA 2 Mins Read

ಬೆಂಗಳೂರು: ಗ್ರಾಮೀಣ ಭಾಗದ ಜನರಲ್ಲಿ ಪಾರದರ್ಶಕತೆ ಮತ್ತು ಆಡಳಿತದ ಮೇಲಿನ ನಂಬಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇನ್ಮುಂದೆ…

BREAKING : ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಕು : ಡಿವೋರ್ಸ್ ಗೆ ಮೊರೆ ಹೋದ ದಂಪತಿ!

SHOCKING : ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಪತಿ ಸಾವಿನ ಖಿನ್ನತೆಯಿಂದ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ.!

BREAKING : ಚಿಕ್ಕಬಳ್ಳಾಪುರದಲ್ಲಿ ಬೈಕ್ ಗೆ ‘KSRTC’ ಬಸ್ ಡಿಕ್ಕಿ : ಸ್ಥಳದಲ್ಲಿ ವೃದ್ಧ ದಂಪತಿ ಸಾವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.