ಬೆಂಗಳೂರು: ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ ಎನ್ನುವಂತೆ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ನಮ್ಮ ಸರ್ಕಾರವು 31 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ. ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಆಗದಂತೆ ಪಾರದರ್ಶಕವಾಗಿ ಶಾಲೆಗಳ ನಿರ್ಮಾಣ ಮಾಡಲಾಗುವುದು. ಇದರಿಂದ ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಜೊತೆಗೆ ವಸತಿನಿಲಯದ ಅನುಕೂಲವು ಸಿಗಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ನಮ್ಮ ಸರ್ಕಾರವು 31 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ. ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಆಗದಂತೆ ಪಾರದರ್ಶಕವಾಗಿ ಶಾಲೆಗಳ ನಿರ್ಮಾಣ ಮಾಡಲಾಗುವುದು. ಇದರಿಂದ ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಜೊತೆಗೆ ವಸತಿನಿಲಯದ ಅನುಕೂಲವು… pic.twitter.com/Og98S5qUYN
— DIPR Karnataka (@KarnatakaVarthe) August 14, 2025
ರಾಜ್ಯದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಸುರಿದರೇ ‘ಕ್ರಿಮಿನಲ್ ಕೇಸ್’ ದಾಖಲು: ಸಚಿವ ರಹೀಂ ಖಾನ್ ಎಚ್ಚರಿಕೆ