ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿಗೆ ಇದೇ ತಿಂಗಳು ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಶಾಲಾರಂಭವಾಗುವ ಜೂನ್ ವೇಳೆಗೆ ರಾಜ್ಯ ಸರ್ಕಾರ 18 ಸಾವಿರ ಶಿಕ್ಷಕರ ನೇಮಕಾತಿ ನಡೆಸಲಿದೆ. ಇದಕ್ಕಾಗಿ ಈಗಾಗಲೇ ಟಿಇಟಿಯನ್ನು ಮುಗಿಸಿ ಫಲಿತಾಂಶ ಪ್ರಕಟಿಸಿದೆ.
ಜನವರಿಯಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗುತ್ತದೆ. ಒಟ್ಟಾರೆ ಜೂನ್ ವೇಳೆಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ.ಇನ್ನೂ ಆಗಸ್ಟ್-ಅಕ್ಟೋಬರ್ ನಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ಸರಣಿ ಆರಂಭವಾಗಲಿದ್ದು, 5,000ಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ನಿರೀಕ್ಷಿಸಲಾಗಿದೆ.







