ಹುಬ್ಬಳ್ಳಿ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ, ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಇನ್ನು ಎರಡು ತಿಂಗಳಲ್ಲಿ ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದ್ದು, ಎರಡೂರು ತಿಂಗಳಲ್ಲಿ ಚುನಾವಣೆಗೆ ನೋಟಿಫಿಕೇಶನ್ ಹೊರಡಿಸಲಾಗುವುದು, ಬಿಜೆಪಿ ಅಧಿಕಾರದಲ್ಲಿದ್ದಾಗ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಮುಂದೂಡುತ್ತಲೆ ಬಂದಿದೆ. ಆದರೆ, ಈ ಬಾರಿ ನಾವು ಚುನಾವಣೆ ನಡೆಸುವುದು ಖಚಿತ ಎಂದರು.