ಬೆಂಗಳೂರು : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಫಲಾನುಭವಿ ಆಧಾರಿತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಹೊಸ ಪಾಲನೆ ಕೊಳಗಳ ನಿರ್ಮಾಣ (ನರ್ಸರಿ/ಮೀನುಮರಿ ಪಾಲನೆ ಕೊಳಗಳು), ಲವಣ/ಕ್ಷಾರಿಯ ಪ್ರದೇಶಗಳಿಗೆ ಹೊಸ ಕೊಳಗಳ ನಿರ್ಮಾಣ ಮತ್ತು ಹೂಡಿಕೆ ವೆಚ್ಚ ಹೊಸ ಮೀನುಕೃಷಿ ಕೊಳಗಳ ನಿರ್ಮಾಣ, ಐಸ್ ಬಾಕ್ಸ್ನೊಂದಿಗೆ ಮೋಟಾರ್ ಸೈಕಲ್ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ಹೊಂದಿರುವ ತ್ರಿಚಕ್ರ ಹಾಗೂ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತಿ ಹೊಂದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.60ರಷ್ಟು ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.40 ರಂತೆ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಸೆ.27 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೂ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಮಾಹಿತಿ ಪಡೆಯಬಹುದಾಗಿದೆ.
ಬಿಜೆಪಿ ಸರ್ಕಾರದ ಎಲ್ಲಾ ಹಗರಣ ತನಿಖೆ ನಿಶ್ಚಿತ, ಇನ್ಮುಂದೆ ದಿನಕ್ಕೊಂದು ‘ಹಗರಣಗಳ ಕಥಾ ಸರಣಿ’ ಬರಲಿದೆ: ಕಾಂಗ್ರೆಸ್
ಬಳ್ಳಾರಿ: ಸೆ.13ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!