Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಹಿಮಂತ ಬಿಸ್ವ ಶರ್ಮಾ ಅಸ್ಸಾಂ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ - Himanta Biswa Sarma Assam CM Oath Ceremony

BREAKING : ಹಿಮಂತ ಬಿಸ್ವ ಶರ್ಮಾ ಅಸ್ಸಾಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಅಧಿಕಾರ ಸ್ವೀಕಾರ | Watch Video

BREAKING : ಸತತ 2ನೇ ಬಾರಿ ಅಸ್ಸಾಂ ‘CM’ ಆಗಿ ಪ್ರಮಾಣವಚನ ಸ್ವೀಕರಿಸಿದ ಹಿಮಂತ್ ಬಿಸ್ವಾ ಶರ್ಮಾ | Watch Video

ಹಂಪಿಯ ಅನಧಿಕೃತ ಹೋಂ ಸ್ಟೇ, ಗೆಸ್ಟ್ ಹೌಸ್ ಮೇಲೆ ದಿಢೀರ್ ಪೋಲೀಸರ ದಾಳಿ : ತಕ್ಷಣವೇ ಬಂದ್ ಮಾಡುವಂತೆ ಸೂಚನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ಯಿಂದ 1,500 ಕ್ಕೂ ಹೆಚ್ಚು ಬಸ್ ವ್ಯವಸ್ಥೆ!
KARNATAKA

ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ಯಿಂದ 1,500 ಕ್ಕೂ ಹೆಚ್ಚು ಬಸ್ ವ್ಯವಸ್ಥೆ!

By kannadanewsnow57

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್ ಎನ್ನುವಂತೆ 1,500 ಹೆಚ್ಚುವರಿ KSRTC ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿದವರಿಗೆ ಶೇ.5ರಷ್ಟು ರಿಯಾಯಿತಿಯನ್ನು ನಿಗಮ ಘೋಷಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ KSRTCಯು, ದಿನಾಂಕ: 06.09.2024 ರಂದು ಸ್ವರ್ಣಗೌರಿ ವ್ರತ, ದಿನಾಂಕ 07.09.2024ರಂದು ಗಣೇಶ ಚತುರ್ಥಿ ಹಾಗೂ ದಿನಾಂಕ 08.09.2024ರಂದು ವಾರಾಂತ್ಯ ದಿನ ಭಾನುವಾರವಾದ್ದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:05.09.2024 ರಿಂದ 07.09.2024 gವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:08.09.2024ದಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಿದೆ ಎಂದು ಹೇಳಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಿದೆ ಎಂದು ತಿಳಿಸಿದೆ.

  • ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
  • ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವÀನ್ನು ಕಲ್ಪಿಸಲಾಗಿದೆ.
  • ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
  • ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
  • ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
  • ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವಂತ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.
  • ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
  • ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
  • ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

500 buses 500 ಕ್ಕೂ ಹೆಚ್ಚು ಬಸ್ ವ್ಯವಸ್ಥೆ! Good news for those going home for Gowri Ganesha festival: KSRTC arranges over 1 ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ಸೆ.5 ರಿಂದ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ
Share. Facebook Twitter LinkedIn WhatsApp Email

Related Posts

ಹಂಪಿಯ ಅನಧಿಕೃತ ಹೋಂ ಸ್ಟೇ, ಗೆಸ್ಟ್ ಹೌಸ್ ಮೇಲೆ ದಿಢೀರ್ ಪೋಲೀಸರ ದಾಳಿ : ತಕ್ಷಣವೇ ಬಂದ್ ಮಾಡುವಂತೆ ಸೂಚನೆ!

1 Min Read

ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ `ಪ್ರತಿಭಾ ಪುರಸ್ಕಾರ’ಕ್ಕೆ ಆನ್ ಲೈನ್ ಅರ್ಜಿ ಆಹ್ವಾನ | Government employees

1 Min Read

ರಾಜ್ಯ ಸರ್ಕಾರದಿಂದ ಕುಕನೂರು ಆಸ್ಪತ್ರೆ 100 ಹಾಸಿಗೆಗಳ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ: 42 ಕೋಟಿ ಅನುಮೋದನೆ

2 Mins Read
Recent News
ಹಿಮಂತ ಬಿಸ್ವ ಶರ್ಮಾ ಅಸ್ಸಾಂ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ - Himanta Biswa Sarma Assam CM Oath Ceremony

BREAKING : ಹಿಮಂತ ಬಿಸ್ವ ಶರ್ಮಾ ಅಸ್ಸಾಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಅಧಿಕಾರ ಸ್ವೀಕಾರ | Watch Video

BREAKING : ಸತತ 2ನೇ ಬಾರಿ ಅಸ್ಸಾಂ ‘CM’ ಆಗಿ ಪ್ರಮಾಣವಚನ ಸ್ವೀಕರಿಸಿದ ಹಿಮಂತ್ ಬಿಸ್ವಾ ಶರ್ಮಾ | Watch Video

ಹಂಪಿಯ ಅನಧಿಕೃತ ಹೋಂ ಸ್ಟೇ, ಗೆಸ್ಟ್ ಹೌಸ್ ಮೇಲೆ ದಿಢೀರ್ ಪೋಲೀಸರ ದಾಳಿ : ತಕ್ಷಣವೇ ಬಂದ್ ಮಾಡುವಂತೆ ಸೂಚನೆ!

ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ `ಪ್ರತಿಭಾ ಪುರಸ್ಕಾರ’ಕ್ಕೆ ಆನ್ ಲೈನ್ ಅರ್ಜಿ ಆಹ್ವಾನ | Government employees

State News
KARNATAKA

ಹಂಪಿಯ ಅನಧಿಕೃತ ಹೋಂ ಸ್ಟೇ, ಗೆಸ್ಟ್ ಹೌಸ್ ಮೇಲೆ ದಿಢೀರ್ ಪೋಲೀಸರ ದಾಳಿ : ತಕ್ಷಣವೇ ಬಂದ್ ಮಾಡುವಂತೆ ಸೂಚನೆ!

By ಸುರೇಶ್‌ KARNATAKA 1 Min Read

ವಿಜಯನಗರ : ವಿಶ್ವವಿಖ್ಯಾತ ಹಂಪಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ಹೋಂ ಸ್ಟೇ, ವಸತಿ ಗೃಹ, ಗೆಸ್ಟ್ ಹೌಸ್…

ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ `ಪ್ರತಿಭಾ ಪುರಸ್ಕಾರ’ಕ್ಕೆ ಆನ್ ಲೈನ್ ಅರ್ಜಿ ಆಹ್ವಾನ | Government employees

ರಾಜ್ಯ ಸರ್ಕಾರದಿಂದ ಕುಕನೂರು ಆಸ್ಪತ್ರೆ 100 ಹಾಸಿಗೆಗಳ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ: 42 ಕೋಟಿ ಅನುಮೋದನೆ

Adilabad Medical Negligence Rs 1 Crore Compensation

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.