Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM

ನಿಮ್ಮ ತಲೆಯ ಮೇಲೆ ಎರಡು ‘ಸುಳಿ’ಗಳಿದ್ರೆ ಏನಾಗುತ್ತೆ ಗೊತ್ತಾ.?

17/06/2025 7:15 PM

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 2000 ಹೆಚ್ಚುವರಿ ‘KSRTC ಬಸ್’ ಸಂಚಾರ | KSRTC Bus Service
KARNATAKA

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: 2000 ಹೆಚ್ಚುವರಿ ‘KSRTC ಬಸ್’ ಸಂಚಾರ | KSRTC Bus Service

By kannadanewsnow0927/03/2025 5:22 AM

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟಂತ ಪ್ರಯಾಣಿಕರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ. ಯುಗಾದಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ದಿನಾಂಕ: 30.03.2025 ರಂದು ಚಂದ್ರಮಾನ ಯುಗಾದಿ, ದಿನಾಂಕ 31.03.2025ರಂದು ರಂಜಾನ್ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:28.03.2025 ರಿಂದ 30.03.2025 gವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:31.03.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು

ವರದಿ: ವಸಂತ ಬಿ ಈಶ್ವರಗೆರೆ

BREAKING NEWS: ಮಚ್ಚು ಹಿಡಿದು ರೀಲ್ಸ್ ಪ್ರಕರಣ: ಮಾಜಿ ಬಿಗ್ ಬಾಸ್ ಸ್ಪರ್ಧಿ ವಿನಯ್, ರಜನ್ ಪೊಲೀಸ್ ಕಸ್ಟಡಿಗೆ

BIG NEWS : ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ರಾಜ್ಯದ 224 ಶಾಸಕರ ಪೈಕಿ ನಾನು ಒಬ್ಬ : ಶಾಸಕ ಶಿವರಾಂ ಹೆಬ್ಬಾರ್

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM1 Min Read

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM1 Min Read

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM1 Min Read
Recent News

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

17/06/2025 7:35 PM

ನಿಮ್ಮ ತಲೆಯ ಮೇಲೆ ಎರಡು ‘ಸುಳಿ’ಗಳಿದ್ರೆ ಏನಾಗುತ್ತೆ ಗೊತ್ತಾ.?

17/06/2025 7:15 PM

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM
State News
KARNATAKA

BREAKING : ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನ ಪಾಸಿಟಿವ್ ಕೇಸ್ | Corona Update

By kannadanewsnow0517/06/2025 7:35 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳ ಸಂಖ್ಯೆ 2,000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು…

BREAKING : ಕಲ್ಬುರ್ಗಿಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಓರ್ವ ಬಾಲಕ ಸಾವು, ಮಹಿಳೆಗೆ ಗಾಯ

17/06/2025 7:11 PM

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM

ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ

17/06/2025 6:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.