ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 28 ರಂದು ರಾತ್ರಿ 9:15ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 07:40ಕ್ಕೆ ಕಲಬುರಗಿ ತಲುಪಲಿದೆ.
ರೈಲು ಸಂಖ್ಯೆ 06520 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 29 ರಂದು ಬೆಳಿಗ್ಗೆ 9:35ಕ್ಕೆ ಕಲಬುರಗಿಯಿಂದ ಹೊರಟು, ಅದೇ ದಿನ ರಾತ್ರಿ 8:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ಈ ರೈಲು 1-ಎಸಿ ಟು ಟೈರ್, 1-ಎಸಿ ತ್ರಿ ಟೈರ್, 11- ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.
ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಶಿವಮೊಗ್ಗ: ‘ಆನವಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ’ನಲ್ಲಿ ಯಶಸ್ವಿಯಾಗಿ ನಡೆದ ‘ರಾಜ್ಯಮಟ್ಟದ ಕಾರ್ಯಾಗಾರ’
ಭಾರತದಲ್ಲಿ 99 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್ | WhatsApp