ಬೆಂಗಳೂರು: ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ-2022ರ ( Mysore Dasara 2022 ) ಮಹೋತ್ಸವ ಸಂಭ್ರಮ ಆರಂಭಗೊಂಡಿದೆ. ಮೈಸೂರು ದಸರಾ ವೀಕ್ಷಣೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ತೆರಳುವಂತ ಪ್ರವಾಸಿಗರಿಗಾಗಿ, ಕೆ ಎಸ್ ಆರ್ ಟಿ ಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ( KSRTC Special Bus ) ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದಲ್ಲದೇ ದಸರಾ ರಜೆಯ ( Dasara Holiday ) ಸಂದರ್ಭದಲ್ಲಿ ವಿವಿಧ ಪ್ರವಾಸಿ, ಧಾರ್ಮಿಕ ಸ್ಥಳಗಳಿಗೆ ತೆರಳೋ ಪ್ರಯಾಣಿಕರಿಗೂ ವಿಶೇಷ ಬಸ್ ಸೌಕರ್ಯವನ್ನು ಕಲ್ಪಿಸಿದೆ. ಈ ಮೂಲಕ ಪ್ರವಾಸಿಗರಿಗೆ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸಾರಿಗೆ ನಿಗಮವು ಮಾಹಿತಿ ಬಿಡುಗಡೆ ಮಾಡಿದ್ದು, ಮೈಸೂರು ದಸರಾ-2022ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ) ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್)ಹಾಗೂ ಅಂಬಾರಿ ಕ್ಲಬ್ ಕ್ಲಾಸ್ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದೆ.
BIG BREAKING NEWS: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ ನಡ್ಡಾ 2ನೇ ಅವಧಿಗೆ ಮುಂದುವರಿಕೆ | JP Nadda
ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮದಿಂದ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ
- ದಸರಾ ಹಬ್ಬದ ರಜೆಗಳ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 30.09.2022 ರಿಂದ03.10.2022 ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸದರಿ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಆಚರಣೆ ಮಾಡಲಾಗುವುದು. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:07/10/2022ರಿಂದ 09/10/2022 ರವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
- ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಿವೆ.
ಮೈಸೂರು ದಸರಾ-2022 ಪ್ರಯುಕ್ತ ಕರಾರಸಾ ನಿಗಮದಿಂದ 450 ವಿಶೇಷ ಸಾರಿಗೆ ವ್ಯವಸ್ಥೆ
- ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 200ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 250ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 450 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.
- ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ “ಫ್ಲೈ ಬಸ್” (ಈಟಥಿ ಃus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.
- ಇ-ಟಿಕೇಟ್ ಬುಕಿಂಗ್ನ್ನು https://ksrtc.karnataka.gov.in/ ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ.
- ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರಾರಸಾ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು “ಮಾಹಿತಿ ಕೇಂದ್ರ” ವನ್ನು ಪ್ರತ್ಯೇಕವಾಗಿ ತೆರೆಯಲಾಗಿದೆ.
- ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಒಟ್ಟು691 ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
- ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟುರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.
- ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
- ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ಅಪ್ ಪಾಯಿಂಟ್ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
- ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುತ್ತದೆ.