ಬೆಂಗಳೂರು: ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ಎಸ್ಎಂವಿಟಿ ಬೆಂಗಳೂರು-ಕಲಬುರಗಿ ನಡುವೆ 2 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06589/06590) ರೈಲು ಸಂಚಾರ
ರೈಲು ಸಂಖ್ಯೆ 06533 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 22 ಮತ್ತು 24 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿರುವ ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.
ಪುನಃ ಇದೇ ರೈಲು (06590) ಕಲಬುರಗಿಯಿಂದ ಡಿಸೆಂಬರ್ 23 ಮತ್ತು 25ರಂದು ಬೆಳಿಗ್ಗೆ 9.34ಕ್ಕೆ ಹೊರಡಲಿರುವ ರೈಲು ಇದೇ ಮಾರ್ಗವಾಗಿ, ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.
ಈ ವಿಶೇಷ ರೈಲುಲ್ಲಿ ಒಂದು ಎಸಿ ಟು ಟೈರ್ ಬೋಗಿ, ಎರಡು ಎಸಿ ತ್ರಿ ಟೈರ್ ಬೋಗಿಗಳು, ಒಂಬತ್ತು ಸ್ಲೀಪರ್ ಕ್ಲಾಸ್ ಬೋಗಿಗಳು, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್ಎಲ್ಆರ್ / ಡಿ ಬೋಗಿಗಳು ಸೇರಿದಂತೆ 18 ಬೋಗಿಗಳು ಇರಲಿವೆ.
ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139 ನಂಬರಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.
ಹಬ್ಬದ ಅವಧಿಯಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಈ ವಿಶೇಷ ರೈಲುಗಳನ್ನು ನಿರ್ವಹಿಸಲಾಗುತ್ತಿದೆ.
ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ನಟ ಡಾಲಿ ಧನಂಜಯ: ವಿವಾಹಕ್ಕೆ ಆಮಂತ್ರಣ
‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆಯಿಲ್ಲ: ದಿಗ್ವಿಜಯ್ ಸಿಂಗ್
BREAKING : ಕಲಬುರ್ಗಿಯ ‘ಹೈಟೆಕ್ ಜಯದೇವ ಹೃದ್ರೋಗ’ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ