ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ ದೀಪಾವಳಿ ಪ್ರಯುಕ್ತ ಹುಬ್ಬಳ್ಳಿ, ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ.
ಈ ಕುರಿತಂತೆ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮತ್ತು ಎಸ್ಎಂವಿಟಿ ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದ ಎಂದಿದೆ.
1. ರೈಲು ಸಂಖ್ಯೆ 07345 ಎಸ್ಎಸ್ಎಸ್ ಹುಬ್ಬಳ್ಳಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (ಒನ್ ವೇ):
ಅಕ್ಟೋಬರ್ 17, 2025 ರಂದು ರೈಲು ಸಂಖ್ಯೆ 07345 ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 11:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 08:00 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.
ಈ ವಿಶೇಷ ರೈಲು ಮಾರ್ಗದಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಈ ರೈಲು 18 ಬೋಗಿಗಳನ್ನು ಒಳಗೊಂಡಿರುತ್ತದೆ. ಅವುಗಳಲ್ಲಿ 01 ಎಸಿ 2-ಟೈರ್, 02 ಎಸಿ 3-ಟೈರ್, 09 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.
2. ರೈಲು ಸಂಖ್ಯೆ 06245/06246 ಎಸ್ಎಂವಿಟಿ ಬೆಂಗಳೂರು–ವಿಜಯಪುರ ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 06245 ಎಸ್ಎಂವಿಟಿ ಬೆಂಗಳೂರು–ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 17, 2025 ರಂದು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 02:05 ಗಂಟೆಗೆ ವಿಜಯಪುರ ತಲುಪಲಿದೆ. ಅದೇ ರೀತಿ, ರೈಲು ಸಂಖ್ಯೆ 06246 ವಿಜಯಪುರ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಅಕ್ಟೋಬರ್ 22, 2025 ರಂದು ವಿಜಯಪುರದಿಂದ ಸಂಜೆ 07:00 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 11:15 ಗಂಟೆಗೆ ಎಸ್ಎಂವಿಟಿ ಬೆಂಗಳೂರನ್ನು ತಲುಪಲಿದೆ.
ಮಾರ್ಗದಲ್ಲಿ, ಈ ರೈಲುಗಳು (06245/46) ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲ್ಲಲಿವೆ. ಈ ರೈಲು ಸಹ ರೈಲು ಸಂಖ್ಯೆ 07345 ರಂತೆಯೇ 18 ಬೋಗಿಗಳ ಸಂಯೋಜನೆಯನ್ನು ಹೊಂದಿರಲಿವೆ.
‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್
ಸಾಗರ ತಾಲ್ಲೂಕು ಕರವೇ ನಾರಾಯಣಗೌಡ ಬಣದ ‘ಮಹಿಳಾ ಘಟಕದ ಅಧ್ಯಕ್ಷರಾಗಿ ಸುಗುಣ ಹೋತನಹಳ್ಳಿ’ ಆಯ್ಕೆ