Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಡುವೈರಿಗಳ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಆಕಾಶದಲ್ಲೇ ಹೊಡೆದುರುಳಿಸುವ ಬಲಿಷ್ಠ ತಂತ್ರಜ್ಞಾನ ಪ್ರದರ್ಶಿಸಿದ ಡಿಆರ್‌ಡಿಒ!

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ನೈರುತ್ಯ ರೈಲ್ವೆಯಿಂದ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ
KARNATAKA

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ನೈರುತ್ಯ ರೈಲ್ವೆಯಿಂದ ಈ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮುಂಬರುವ ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕದ ವಿವಿಧ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರ ಹೀಗಿದೆ:

1. ರೈಲು ಸಂಖ್ಯೆ 06503/06504 ಎಸ್‌ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):

ರೈಲು ಸಂಖ್ಯೆ 06503 ಮಾರ್ಚ್ 18ರಂದು ಸಂಜೆ 7ಕ್ಕೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 7.35ಕ್ಕೆ ಬೆಳಗಾವಿ ತಲುಪಲಿದೆ. ಹಾಗೆಯೇ, ರೈಲು ಸಂಖ್ಯೆ 06504 ಮಾರ್ಚ್ 22ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ರೈಲು 2 ಎಸಿ 2-ಟೈರ್, 4 ಎಸಿ 3-ಟೈರ್, 7 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌ಡಿ ಸೇರಿದಂತೆ ಒಟ್ಟು 19 ಬೋಗಿಗಳನ್ನು ಹೊಂದಿರುತ್ತದೆ.

2. ರೈಲು ಸಂಖ್ಯೆ 06277/06278 ಯಶವಂತಪುರ–ವಿಜಯಪುರ–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):

ರೈಲು ಸಂಖ್ಯೆ 06277 ಮಾರ್ಚ್ 18ರಂದು (ಬುಧವಾರ) ರಾತ್ರಿ 09:50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 09:45ಕ್ಕೆ ವಿಜಯಪುರ ತಲುಪಲಿದೆ. ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 06278 ಮಾರ್ಚ್ 22ರಂದು (ಭಾನುವಾರ) ಮಧ್ಯಾಹ್ನ 01:30ಕ್ಕೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯರಾತ್ರಿ 12:30ಕ್ಕೆ ಯಶವಂತಪುರ ಸೇರಲಿದೆ. ಈ ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೇಬೆನ್ನೂರು, ಎಸ್‌ಎಂಎಂ ಹಾವೇರಿ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲ್ಲಲಿದೆ.

3. ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ–ಯಶವಂತಪುರ ಒನ್-ವೇ ವಿಶೇಷ ಎಕ್ಸ್‌ಪ್ರೆಸ್:

ಮಾರ್ಚ್ 18ರಂದು (ಬುಧವಾರ) ಈ ಏಕಮುಖ ವಿಶೇಷ ರೈಲು ಸಂಚರಿಸಲಿದೆ. ಇದು ಮಧ್ಯಾಹ್ನ 12ಕ್ಕೆ ಹುಬ್ಬಳ್ಳಿಯಿಂದ ಹೊರಟು, ಅಂದು ರಾತ್ರಿ 08:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲುಗಳ ಸಂಖ್ಯೆ 06277/78 ಮತ್ತು 07379 ಒಟ್ಟು 21 ಬೋಗಿಗಳನ್ನು ಹೊಂದಿರಲಿದ್ದು, ಇದರಲ್ಲಿ 1 ಎಸಿ 2-ಟೈರ್, 4 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌ಡಿ ಬೋಗಿಗಳಿರಲಿವೆ.

4. ರೈಲು ಸಂಖ್ಯೆ 06267/06268 ಯಶವಂತಪುರ–ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ (1 ಟ್ರಿಪ್):

ರೈಲು ಸಂಖ್ಯೆ 06267 ಮಾರ್ಚ್ 18ರಂದು (ಬುಧವಾರ) ಮಧ್ಯಾಹ್ನ 12ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 06:45ಕ್ಕೆ ಮಡಗಾಂವ್ ತಲುಪಲಿದೆ. ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲಲಿದೆ. ಮರಳಿ ಬರುವಾಗ ರೈಲು ಸಂಖ್ಯೆ 06268 ಮಾರ್ಚ್ 19ರಂದು (ಗುರುವಾರ) ಬೆಳಿಗ್ಗೆ 11ಕ್ಕೆ ಮಡಗಾಂವ್‌ನಿಂದ ಹೊರಟು, ಮರುದಿನ ಬೆಳಿಗ್ಗೆ 05:20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ಮರಳುವಾಗ ಮೇಲಿನ ಎಲ್ಲಾ ನಿಲ್ದಾಣಗಳ ಜೊತೆಗೆ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಲ್ಲೂ ನಿಲುಗಡೆ ಹೊಂದಿರಲಿದೆ. ಈ ರೈಲು 20 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌ಡಿ ಬೋಗಿಗಳನ್ನು ಹೊಂದಿರುತ್ತದೆ.

ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ‘115 ಹೊಸ KSRTC ಬಸ್ಸು’ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

1 Min Read

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

1 Min Read

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

2 Mins Read
Recent News

ಕಡುವೈರಿಗಳ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಆಕಾಶದಲ್ಲೇ ಹೊಡೆದುರುಳಿಸುವ ಬಲಿಷ್ಠ ತಂತ್ರಜ್ಞಾನ ಪ್ರದರ್ಶಿಸಿದ ಡಿಆರ್‌ಡಿಒ!

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

​ಫಿಫಾ ವಿಶ್ವಕಪ್ 2026: ಕಾರ್ಲೊ ಅನ್ಸೆಲೊಟ್ಟಿ ಪದಾರ್ಪಣೆಯ ಪಂದ್ಯದಲ್ಲೇ ಬ್ರೆಜಿಲ್‌ಗೆ ಶಾಕ್; ಮೊರಾಕೊ ವಿರುದ್ಧ 1-1 ಗೋಲುಗಳ ಸಮಬಲ!

State News
KARNATAKA

ರಾಜ್ಯದ `ಆಸ್ತಿ ತೆರಿಗೆ’ ಪಾವತಿದಾರರಿಗೆ ಗುಡ್ ನ್ಯೂಸ್: ಜೂನ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ!

By kannadanewsnow57 KARNATAKA 1 Min Read

ಬೆಂಗಳೂರು: 2026-27ನೇ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ನಿಗದಿತ ಅವಧಿಯೊಳಗೆ ಪಾವತಿಸುವ ಸಾರ್ವಜನಿಕರಿಗೆ ಸರ್ಕಾರವು ವಿಶೇಷ ರಿಯಾಯಿತಿಯೊಂದನ್ನು ಘೋಷಿಸಿದೆ. ತೆರಿಗೆದಾರರು…

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

SHOCKING : ದಿನಕ್ಕೆ 3-4 ಬಾಟಲಿ ‘ಸ್ಟಿಂಗ್ ಜ್ಯೂಸ್’ ಕುಡಿಯುತ್ತಿದ್ದ ಯುವಕ ಕಿಡ್ನಿ ಫೇಲಾಗಿ ಸಾವು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.