ಬೆಂಗಳೂರು: ಡ್ರೈವಿಂಗ್ ಕಲಿಯಬೇಕು ಎಂಬುದು ಅನೇಕರ ಆಸೆ. ಆದ್ರೆ ಡ್ರೈವಿಂಗ್ ಶಾಲೆಗೆ ದುಬಾರಿ ಫೀಸ್ ಕಟ್ಟಿ ಹೋಗಿ ಕಲಿಯೋದು ಕಷ್ಟ. ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿಯಿಂದ ಉಚಿತ ಲಘು ಹಾಗೂ ಭಾರೀ ಚಾಲನಾ ವಾಹನ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬೆಂ.ಮ.ಸಾ.ಸಂಸ್ಥೆಯು, ಕರ್ನಾಟಕ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್.ಟಿ)ಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯ (ವಸತಿ ಸಹಿತ / ವಸತಿ ರಹಿತ) ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.
ಸದರಿ ತರಬೇತಿಯನ್ನು ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿ(ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್.ಟಿ)ಗಳ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು/ಸಲ್ಲಿಸಬೇಕಾಗಿರುವ ದಾಖಲಾತಿಗಳ ವಿವರ ಇದರ ಜೊತೆ ಇರುವ ಚಿತ್ರದಲ್ಲಿ ನೀಡಲಾಗಿದೆ. ಆಸಕ್ತಿ ಇರುವ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್() ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. sevasindhuservices.karnataka.gov.in