ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ( Private Lands ) ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ( Title Deed ) ನೀಡುವಂತೆ ರಾಜ್ಯ ಸರ್ಕಾರ ( Karnataka Government ) ಆದೇಶಿಸಿದೆ. ಈ ಮೂಲಕ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದಂತ ಜನತೆಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.

BIGG NEWS : ಬೆಂಗಳೂರು ಜನತೆಗೆ ಬಿಗ್‌ಶಾಕ್‌ : ಈ ಪ್ರದೇಶಗಳಲ್ಲಿ ನ 9,10 ರಂದು ವಿದ್ಯುತ್ ಕಡಿತ | Power Cut in Bengaluru

ಈ ಕುರಿತಂತೆ ಕಂದಾಯ ಇಲಾಖೆಯ ( Revenue Department ) ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ನೆಲೆಗೊಂಡಿರುವಂತ ಜನವಸತಿಗಳ ಪೈಕಿ ಹಲವಾರು ಜನವಸತಿಗಳು ವಿಶೇಷವಾಗಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ನಾಯಕರ ಹಟ್ಟಿ, ಕುರುಬರ ಹಟ್ಟಿ, ಹಾಡಿ, ಮಜರೆ, ದೊಡ್ಡಿ, ಪಾಳ್ಯ, ಕ್ಯಾಂಪ್, ಕಾಲೋನಿ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಟ್ಟಿರುವ ಜನವಸತಿಗಳು ದಾಖಲೆರಹಿತವಾಗಿಯೇ ಸಮಾಜದ ಮುಖ್ಯ ವಾಹಿನಿಗೆ ಬರದೇ ಉಳಿದುಕೊಂಡಿರುತ್ತಾರೆ ಎಂದಿದ್ದಾರೆ.

BIGG NEWS : ಸತೀಶ್ ಹೇಳಿಕೆ ಅವರ ವೈಯಕ್ತಿಕ ವಿಚಾರ, ಕಾಂಗ್ರೆಸ್​ ಪಕ್ಷಕ್ಕೆ ಡ್ಯಾಮೇಜ್ ಆಗುವುದಿಲ್ಲ : ಡಿ.ಕೆಶಿವಕುಮಾರ್ ಪ್ರತಿಕ್ರಿಯೆ

ಇನ್ನೂ ಇಂತಹ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಅಥವಾ ಅಸ್ತಿತ್ವದಲ್ಲಿರುವ ಕಂದಾಯ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿನ ನಿವಾಸಿಗಳಿಗೆ ವಾಸ್ತವ್ಯದ ಹಕ್ಕು ದಾಖಲೆಗಳನ್ನು ಒದಗಿಸಿ, ಆ ಕುಟುಂಬಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಚುನಾವಣೆಯಿಲ್ಲದೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದು ಹೇಗೆ ? : ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು

ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾಲ ಕಾಲಕ್ಕೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸುತ್ತಿದೆ. ಸರ್ಕಾರವು ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಕಲಂ 38ಎ ಮತ್ತು ನಿಯಮ 9ಸಿ ಸೇರ್ಪಡೆಗೊಳಿಸುವ ಮೂಲಕ ಖಾಸಗಿ ಜಮೀನಿನಲ್ಲಿ ನೆಲೆಗೊಂಡಿರುವ ದಾಖಲೆರಹಿತ ಜನವಸತಿ ಪ್ರದೇಶಗಳಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

EWS ಕೋಟಾದಿಂದ ಎಸ್ಸಿ/ಎಸ್ಟಿ/ಒಬಿಸಿ ಮೀಸಲಾತಿ ಹಾಳು ಮಾಡುವುದಿಲ್ಲ: ಸುಪ್ರಿಂಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ

Share.
Exit mobile version