ಬೆಂಗಳೂರು :ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ ಗತಿಯಲ್ಲಿ ಪೂರ್ಣ ಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನಗರ ಅವಾಸ್ ಯೋಜನೆ ಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕಾಮಗಾರಿ ಗೆ ವೇಗ ನೀಡಬೇಕು ಎಂದು ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಈ ಯೋಜನೆಯಡಿ ಚಾಲ್ತಿಯಲ್ಲಿರುವ 52 ಸಾವಿರ ಮನೆಗಳ ಪೈಕಿ 11400 ಮನೆ ಆದಷ್ಟು ಶೀಘ್ರ ಹಂಚಿಕೆ ಮಾಡಬೇಕಿದ್ದು, ವಸತಿ ಸಮುಚ್ಚಯ ಹಾಗೂ ಮೂಲ ಸೌಕರ್ಯ ಕಾಮಗಾರಿ ಕಾಲ ಮಿತಿಯಲ್ಲಿ ಪೂರ್ಣ ಗೊಳಿಸಿ ಎಂದು ಹೇಳಿದರು.
ಬಸವ, ಅಂಬೇಡ್ಕರ್, ದೇವರಾಜ ಅರಸು, ವಾಜಪೇಯಿ ನಗರ ಹಾಗೂ ಪ್ರಧಾನ ಮಂತ್ರಿ ಅವಾಸ್ ಗ್ರಾಮೀಣ ಮನೆಗಳ ವಿಚಾರದಲ್ಲಿ ಫಲಾನುಭ ವಿಗಳ ಆಯ್ಕೆ ವಿಳಂಬದ ಬಗ್ಗೆ ದೂರುಗಳಿದ್ದು, ಶಾಸಕರ ಜತೆ ಪತ್ರ ವ್ಯವಹಾರ ನಡೆಸಿ ಸಮಸ್ಯೆ ಬಗೆಹರಿಸಿ ಕೊಳ್ಳಿ. ಸಬ್ಸಿಡಿ ಮೊತ್ತ ಸಕಾಲಕ್ಕೆ ತಲುಪುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ರೂಪಿಸಿರುವ ಮುಖ್ಯಮಂತ್ರಿ ಯವರ ಒಂದು ಲಕ್ಷ ಮನೆ ಕಾಮಗಾರಿ ಆದಷ್ಟು ಶೀಘ್ರ ಪೂರ್ಣ ಗೊಳಿಸಿ, ಫಲಾನುಭ ವಿಗಳು ವರ್ಷ ಗಳಿಂದ ಕಾಯುತ್ತಿದ್ದು ಶೀಘ್ರ ಹಂಚಿಕೆಗೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ನಗರ ಮತ್ತು ಗ್ರಾಮೀಣ ಅವಾಸ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ಪಾಲುದಾರಿಕೆ ಇರುವುದರಿಂದ ಹೆಚ್ಚಿನ ಅನುದಾನ ಪಡೆಯಲು ಸದ್ಯದಲ್ಲೇ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಹೇಳಿದರು.
ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ, ಪ್ರಧಾನ ಅಭಿಯಂತರ ಸಂಜೀವ ರೆಡ್ಡಿ, ಪರಶು ರಾಮನ ಗೌಡ ಮತ್ತಿತರರು ಉಪಸ್ಥಿತರಿದ್ದರು.
BREAKING: ಅರುಣಾಚಲ ಪ್ರದೇಶದ ನೂತನ ಸಿಎಂ ಆಗಿ ‘ಪೆಮಾ ಖಂಡು’ ಆಯ್ಕೆ | Pema Khandu
ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್