ಬೆಂಗಳೂರು : ಶಿಕ್ಷಕ, ಉಪನ್ಯಾಸಕ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್, ಖಾಸಗಿ ಅನುದಾನಿತ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.
ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.
ಷರತ್ತುಗಳು:
- ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು.
- ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.
- ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
- 2016-2017 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಖಚಿತಪಡಿಸಿಕೊಳ್ಳುವುದು. ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು
- ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.
- ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು.
- ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 ಟಿಪಿಯು 2011. ದಿನಾಂಕ:30-09-2011 ಅನ್ನು ಹಿಂಪಡೆದು, ಹುದ್ದೆಗಳ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.