ಬೆಳಗಾವಿ: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳ ( Teacher Recruitment ) ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಇನ್ನೂ 15,000 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಹೇಳಿದ್ದಾರೆ. ಈ ಮೂಲಕ ಶಿಕ್ಷಕರ ಹುದ್ದೆಯ ( Teacher Job ) ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ನಿನ್ನೆ ಪರಿಷತ್ ನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆ ವೇಳೆ ಉತ್ತರಿಸಿದಂತ ಅವರು, ಈ ವರ್ಷ 15 ಸಾವಿರ ವಿಶೇಷ ನೇಮಕಾತಿಗೆ ಚಾಲನೆ ನೀಡಲಾಗಿದೆ. ಇನ್ನೂ 15 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದು, ಅವುಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯದ ಕಾಲೇಜುಗಳಲ್ಲಿ ಉಪನ್ಯಾಸಕರ, ಸಹ ಪ್ರಾಧ್ಯಾಪಕರು, ಪ್ರಾಧ್ಯಾಪಕರ ಬೋಧನಾ ಕ್ರಮ ಶೈಲಿಯನ್ನು ಬದಲಿಸಲಾಗುವುದು ಎಂದರು ಹೇಳಿದರು.
BIGG NEWS: ಇಂದು ವಿಜಯಪುರದಲ್ಲಿ ಕಾಂಗ್ರೆಸ್ ಕೃಷ್ಣ ಜನಾಂದೋಲನ ಸಮಾವೇಶ; ಸಾವಿರಾರು ಜನ ಸೇರುವ ನಿರೀಕ್ಷೆ
ಪತ್ನಿ ಕಳೆದುಕೊಂಡ ಪತಿಗೂ ಶಿಶುಪಾಲನಾ ರಜೆ – ಸಚಿವ ಜೆ.ಸಿ ಮಾಧುಸ್ವಾಮಿ ಭರವಸೆ