ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದ್ರೇ ಶೀಘ್ರವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಸ್ ವಿ ಸಂಕನೂರು ಅವರು ರಾಜ್ಯದ ವಿಶ್ವವಿದ್ಯಾಲಯಗಳಲ್ಲನ ಬೋಧಕ, ಬೋಧಕೇತರ ಸಿಬ್ಬಂದಿಗಳನ್ನು ಯಾವಾಗ ನೇಮಕ ಮಾಡಿಕೊಳ್ಳುತ್ತೀರಿ. ಶೇ.60ರಷ್ಟು ಬೋಧ ಸಿಬ್ಬಂದಿ ಹುದ್ದೆ ಖಾಲಿ ಇದ್ದಾವೆ. ಬೋಧಕೇತರ ಸಿಬ್ಬಂದಿ ಹುದ್ದೆಗಳು ಶೇ.80ರಷ್ಟು ಖಾಲಿ ಇದ್ದಾವೆ. ಯಾವ ಕಾಲಮಿತಿಯಲ್ಲಿ ಭರ್ತಿ ಮಾಡುತ್ತೀರಿ ಅಂತ ಕೇಳಿದರು.
ಈ ಪ್ರಶ್ನೆಗೆ ಉತ್ತರಿಸಿದಂತ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು, ಹಿಂದಿನಿಂದಲೂ ಬೋಧಕ, ಬೋಧಕೇತರ ಹುದ್ದೆಗಳು ವಿವಿಯಲ್ಲಿ ಖಾಲಿ ಇದ್ದಾವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ವಿವಿಗಳಲ್ಲಿನ ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲಾಗಿದೆ ಎಂದರು.
ಜಾನಪದ ವಿವಿಯಲ್ಲಿ ಹಗರಣ ಆಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೆಇಎ ಮೂಲಕ ಪರೀಕ್ಷೆ ನಡೆಸಿ, ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಸಚಿವ ಸಂಪುಟದ ಉಪ ಸಮಿತಿಯನ್ನು ಕೂಡ ಮಾಡಲಾಗಿದೆ. ಕೆಲವೆಡೆ ಅವೈಜ್ಞಾನಿಕವಾಗಿ ಹುದ್ದೆ ಸೃಷ್ಠಿಸಲಾಗಿದೆ. ಪರಿಶೀಲನೆಗಾಗಿ ಸಿಎಂ ಸಿದ್ಧರಾಮಯ್ಯ ಅವರಿಗೆ ಕಳುಹಿಸಲಾಗಿದೆ ಎಂದರು.
ಶೀಘ್ರದಲ್ಲೇ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ತಿಳಿಸುವ ಮೂಲಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದರು.
ಕತ್ರಾದಲ್ಲಿ ಮದ್ಯ ಸೇವಿಸಿದ್ದಕ್ಕಾಗಿ ಓರ್ರಿ ಅಕಾ ಓರ್ಹಾನ್ ಅವತ್ರಮಣಿ ಸೇರಿ ಇತರರ ವಿರುದ್ಧ ಪ್ರಕರಣ ದಾಖಲು
BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!