ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು ದಿನಾಂಕ: 29.08.2022 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂ.ಸಂ. 0821-2515944 ಸಂಪರ್ಕಿಸಬಹುದೆಂದು ಕರಾಮುವಿ ಪ್ರಭಾರ ಕುಲಸಚಿವರಾದ ಡಾ. ಎ. ಖಾದರ್ ಪಾಷ ತಿಳಿಸಿದ್ದಾರೆ.
BIGG NEWS : ವೀರ ಸಾವರ್ಕರ್ ಕುರಿತು ಮಾತನಾಡುವುದು ಕಾಂಗ್ರೆಸ್ ನಾಯಕರ ದೌರ್ಬಲ್ಯ : ಸಚಿವ ಸುಧಾಕರ್ ವಾಗ್ದಾಳಿ
ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನ
ಸಹಕಾರ ಇಲಾಖೆಯ ತಾಲ್ಲೂಕು ಪಂಚಾಯತ್ ಯೋಜನೆಯಡಿ 2022-23 ನೇ ಸಾಲಿಗೆ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ಗಳಿಂದ ಪರಿಶಿಷ್ಟ ಜಾತಿ ಸದಸ್ಯರಿಗೆ ನೀಡಿದ ದೀರ್ಘಾವಧಿ ಸಾಲದ ಮೇಲೆ ಶೇ.60 ಸಹಾಯಧನ ಯೋಜನೆಯಡಿ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
BIGG NEWS : ಕಾಂಗ್ರೆಸ್ `ಮಡಿಕೇರಿ ಚಲೋ’ ಪ್ರತಿಯಾಗಿ ಬಿಜೆಪಿಯಿಂದ ಜನಜಾಗೃತಿ ಸಮಾವೇಶ
ಅರ್ಹ ಫಲಾನುಭವಿಗಳು ಆಗಸ್ಟ್ 22 ರಿಂದ http://shimoga.nic.in ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅಥವಾ ನೇರವಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಈ ಕಚೇರಿಯಲ್ಲಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 09 ಕಡೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ, ದೂ.ಸಂ: 08182-225182 ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.