ಬೆಂಗಳೂರು: ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.
ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ ಆದ ‘ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಈಗ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (AB PMJAY-CM’s ArK) ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಈ ಕುರಿತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನೂತನ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಉಚಿತ ಚಿಕಿತ್ಸೆ: ಈ ಮೊದಲು ಇದ್ದ ಮೂಲ ಚಿಕಿತ್ಸೆಯ ಜೊತೆಗೆ ಈಗ IVIG ಥೆರಪಿಯನ್ನೂ ‘ಹೆಚ್ಚುವರಿ ಪ್ಯಾಕೇಜ್’ ಆಗಿ ನೀಡಲಾಗುವುದು. ಪ್ರತಿ ರೋಗಿಗೆ ಗರಿಷ್ಠ ₹2 ಲಕ್ಷದವರೆಗೆ ಈ ಚಿಕಿತ್ಸಾ ಸೌಲಭ್ಯ ಉಚಿತವಾಗಿ ದೊರೆಯಲಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ.
ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.
ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ ಆದ 'ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್' (IVIG)… pic.twitter.com/STsXxmSWrN
— DIPR Karnataka (@KarnatakaVarthe) January 16, 2026
ಇಂದಿನಿಂದ ಜನವರಿ.25ರವರೆಗೆ ʼಬೆಂಗಳೂರು ಹಬ್ಬʼ: ಸಂಜೆ 5.30ಕ್ಕೆ ಸಿಎಂ ಸಿದ್ಧರಾಮಯ್ಯ ಚಾಲನೆ
SHOCKING: ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ.!








