Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

ಮಧುಮೇಹಿಗಳು ಮಾವಿನಹಣ್ಣು ತಿನ್ನಬಹುದೇ? ಸಕ್ಕರೆ ಮಟ್ಟ ಏರದಂತೆ ಮಾವು ಸವಿಯಲು ಇಲ್ಲಿದೆ ತಜ್ಞರ ಮಾರ್ಗದರ್ಶಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ವೈಷ್ಟೋದೇವಿ’ಗೆ ತೆರಳೋ ಯಾತ್ರಾರ್ಥಿಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಗುಡ್ ನ್ಯೂಸ್: 5,000 ಧನ ಸಹಾಯ
KARNATAKA

‘ವೈಷ್ಟೋದೇವಿ’ಗೆ ತೆರಳೋ ಯಾತ್ರಾರ್ಥಿಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಗುಡ್ ನ್ಯೂಸ್: 5,000 ಧನ ಸಹಾಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ವೈಷ್ಟೋದೇವಿಗೆ ಭೇಟಿ ನೀಡುವಂತ ಭಕ್ತಾಧಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಅದೇನೆಂದರೇ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಯಾತ್ರಾರ್ಥಿಗಳಿಗೆ 5,000 ಧನ ಸಹಾಯ ಮಾಡೋದಕ್ಕೆ ನಿರ್ಧರಿಸಿದ್ದಾರೆ.

ಇಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ಘೋಷಣೆ ಮಾಡಲಾಗಿದೆ.

ಇಂದಿನ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ಸಭೆಯಲ್ಲಿ ಈ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ

* ವೈಷ್ಟೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ. 5000/-ಗಳ ಸಹಾಯ ಧನ ನೀಡಲು ತೀರ್ಮಾನಿಸಲಾಯಿತು.

* ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಿಸಲು ತೀರ್ಮಾನಿಸಲಾಯಿತು.

* 120 ವರುಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ ಮಾಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಲಾಯಿತು.

* ಮಕ್ಕಳಿಗೆ ನೀಡುತ್ತಿರುವ ವಿದ್ಯಾ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈಗಾಗಲೇ ಮುಕ್ತಾಯವಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಡಿಸೆಂಬರ್ 31 ರವರೆಗೂ ಕಾಲಾವಕಾಶ ನೀಡಿ, ಇದರ ಸದುಪಯೋಗ ಪಡೆದುಕೊಳ್ಳಲು ಪ್ರಚಾರ ನೀಡುವಂತೆ ತೀರ್ಮಾನಿಸಲಾಯಿತು.

* ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯನ್ನು ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಿಸಲು ತೀರ್ಮಾನಿಸಲಾಯಿತು.

* ಅವಧಿ ಮುಗಿಯುವ 14 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅವಧಿ ಮುಗಿದ ನಂತರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು, ಅರ್ಜಿ ಸ್ವೀಕಾರವಾಗಿರುವ 28 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅರ್ಜಿ ಸ್ವೀಕಾರವಾಗದೇ ಇರುವ 13 ದೇವಾಲಯಗಳಿಗೆ ಪುನಃ ಅರ್ಜಿ ಕರೆಯಲು ಹಾಗೂ ಬೇಲೂರು ಶ್ರೀ ಚನ್ನಕೇಶವ ದೇವಾಲಯದ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು.

ಸದರಿ ಸಭೆಯಲ್ಲಿ‌ ಸದಸ್ಯರುಗಳಾದ ಕೆ. ಎಮ್. ನಾಗರಾಜ್, ದ್ವಾರಕಾನಾಥ್, ಕೆ. ಚಂದ್ರಶೇಖರ್, ಮಹಾಂತೇಶ ಪ್ರಭು ಶಾಸ್ತ್ರಿ, ಮಲ್ಲಿಕಾ ಪಕ್ಕಲ್, ಮಠಸಿದ್ಧ ಪಂಡಿತಾರಾಧ್ಯ, ರಾಧಾಕೃಷ್ಣ, ಶ್ರೀವತ್ಸ ಕೇದಿಂಥ್ಯಾಲಯ,ಡಾ. ಎಂ. ವಿ. ವೆಂಕಟೇಶ್ ಆಯುಕ್ತರು ಉಪಸ್ಥಿತರಿದ್ದರು.

BIG NEWS: ರಾಜ್ಯದಲ್ಲಿನ ‘ಇ-ಖಾತಾ ಹಂಚಿಕೆ’ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ಪೂರೈಕೆ

Share. Facebook Twitter LinkedIn WhatsApp Email

Related Posts

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

2 Mins Read

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

2 Mins Read

​ರಾಜೀನಾಮೆಯ ನಂತರವೂ ‘ಕಾವೇರಿ’ ನಿವಾಸದಲ್ಲೇ ಸಿದ್ದರಾಮಯ್ಯ ಮುಂದುವರಿಕೆ: ಕಾರಣವೇನು?

1 Min Read
Recent News

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

ಕಿಡ್ನಿ ಸ್ಟೋನ್ ಅಪಾಯ ತಡೆಯುತ್ತೆ ‘ಪೊಟ್ಯಾಸಿಯಂ’: ಮೂತ್ರಪಿಂಡದ ಆರೋಗ್ಯಕ್ಕೆ ಇಲ್ಲಿದೆ ತಜ್ಞರ ಮಾಹಿತಿ!

ಮಧುಮೇಹಿಗಳು ಮಾವಿನಹಣ್ಣು ತಿನ್ನಬಹುದೇ? ಸಕ್ಕರೆ ಮಟ್ಟ ಏರದಂತೆ ಮಾವು ಸವಿಯಲು ಇಲ್ಲಿದೆ ತಜ್ಞರ ಮಾರ್ಗದರ್ಶಿ!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

State News
KARNATAKA

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ದೀರ್ಘಕಾಲದ ಕಾಯುವಿಕೆ ಮತ್ತು ನಿರಂತರ ಹೋರಾಟಕ್ಕೆ ಕೊನೆಗೂ ಕಾಲ ಕೂಡಿಬಂದಿದೆ. ಕಾಂಗ್ರೆಸ್ ಪಕ್ಷದ ಪರಮ ನಿಷ್ಠಾವಂತ ನಾಯಕ ಹಾಗೂ…

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ‘ಯೆಲ್ಲೋ ಲೈನ್’ಗೆ ಹೆಚ್ಚುವರಿ ರೈಲುಗಳ ಸೇರ್ಪಡೆ

​ರಾಜೀನಾಮೆಯ ನಂತರವೂ ‘ಕಾವೇರಿ’ ನಿವಾಸದಲ್ಲೇ ಸಿದ್ದರಾಮಯ್ಯ ಮುಂದುವರಿಕೆ: ಕಾರಣವೇನು?

ಕರ್ನಾಟಕದಲ್ಲಿ ಯುವ ಯುಗ ಆರಂಭ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.