ಬೆಂಗಳೂರು: ಇಂದಿನಿಂದ ಚಿಕಿತ್ಸೆಗಾಗಿ ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಈ ಮೂಲಕ ಚಿಕಿತ್ಸೆಗಾಗಿ ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ರಾಜ್ಯ ಆಹಾರ ಇಲಾಖೆಯಿಂದ ಮಾಹಿತಿ ನೀಡಿದ್ದು, ಬಡವರಿಗಾಗಿ ನೀಡಲಾಗುವಂತ ಬಿಪಿಎಲ್ ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದೆ ಎಂಬುದು ವದಂತಿಯಾಗಿದೆ. ಈಗ ಕೇವಲ ಚಿಕಿತ್ಸೆಗಾಗಿ ಮಾತ್ರವೇ ಬಿಪಿಎಲ್ ಕಾರ್ಡ್ ಅವಶ್ಯಕವಿದ್ದಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಂತ ತಿಳಿಸಿದೆ.
ಜುಲೈ.11ರ ಇಂದಿನಿಂದ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗಾಗಿ ಬೇಕಾಗುವ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಅಲ್ಲದೇ ಬಿಪಿಎಲ್ ಕಾರ್ಡ್ ಗಳಲ್ಲಿನ ಹೆಸರು, ವಿಳಾಸ ಹಾಗೂ ಇತರೆ ತಿದ್ದುಪಡಿಗೂ ಅವಕಾಶ ನೀಡಲಾಗಿದೆ ಅಂತ ಮಾಹಿತಿ ನೀಡಿದ್ದಾರೆ.
BREAKING : ವಾಲ್ಮೀಕಿ ಹಗರಣ : ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ
BREAKING : ಚಿತ್ರದುರ್ಗದ ಮುರುಘಾ ಮಠದಲ್ಲಿ ‘ಮುರುಘಾಶ್ರೀ’ ಗಳ 20 ಲಕ್ಷ ಮೌಲ್ಯದ ‘ಬೆಳ್ಳಿ’ ಪುತ್ಥಳಿ ಕಳ್ಳತನ!