ದಾವಣಗೆರೆ : ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅನಧಿಕೃತ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಿ, ಅರ್ಹರಿಗೆ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ದಾವಣಗೆರೆಯಲ್ಲಿ ಜಿಲ್ಲಾಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶೀಘ್ರವೆ ಹೊಸ ರೇಷನ್ ಕಾರ್ಡ್ ವಿತರಿಸಲಾಗುವುದು. ಅನಧಿಕೃತ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಿ, ಅರ್ಹರಿಗೆ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ತೂಕ ಮತ್ತು ಅಳತೆಯ ಗುಣಮಟ್ಟವನ್ನು ಕಾಪಾಡುವಲ್ಲಿ ಗಮನ ವಹಿಸಬೇಕು. ಪೆಟ್ರೋಲ್ ಬಂಕ್ ಗಳಲ್ಲಿ ನಾಗರಿಕರಿಗೆ ಯಾವುದೇ ಮೋಸವಾಗದಂತೆ ನಿಗಾವಹಿಸ ಬೇಕು. ಹಾಗೆಯೇ ಅಂಗಡಿಗಳಲ್ಲಿ ತೂಕದ ಮೆಷಿನ್ ಗಳನ್ನು ತಪಾಸಣೆ ಮಾಡಿ ಸತ್ಯಾಪಣ ಮತ್ತು ಮುದ್ರೆ ಮಾಡಿ ಪ್ರಮಾಣಪತ್ರ ವಿತರಿಸಬೇಕು ಎಂದು ಸೂಚಿಸಿದ್ದಾರೆ.