Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೆಇಇ ಅಡ್ವಾನ್ಸ್‌ಡ್-2026: ಪರೀಕ್ಷಾ ಮಾರ್ಗಸೂಚಿ ಪ್ರಕಟ; ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿವೆ

BIG NEWS: ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು, ಹೊಸ ರೂಪದ ಕೇಸರಿ ಪೇಟಕ್ಕೆ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

BIG BREAKING: ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ 3ನೇ ಹಂತದ ‘SIR’ ಜಾರಿ: ಚುನಾವಣಾ ಆಯೋಗದ ಮಹತ್ವದ ನಿರ್ಧಾರ | ECI SIR

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಇಂದಿನಿಂದ ಬಳ್ಳಾರಿಯಲ್ಲಿ `ಅಗ್ನಿವೀರ್ ಸೇನಾ ನೇಮಕಾತಿ’ ರ‍್ಯಾಲಿ
KARNATAKA

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಇಂದಿನಿಂದ ಬಳ್ಳಾರಿಯಲ್ಲಿ `ಅಗ್ನಿವೀರ್ ಸೇನಾ ನೇಮಕಾತಿ’ ರ‍್ಯಾಲಿ

By kannadanewsnow57

ನವೆಂಬರ್ 13 ರಿಂದ 18 ರ ವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿ ಯಶಸ್ವಿಗೊಳಿಸಲು, ಎಲ್ಲಾ ಇಲಾಖೆಗಳ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದುಕೊಂಡು ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.

ಮಂಗಳವಾರ ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯ ಅಂತಿಮ ಸಿದ್ಧತೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಮ್ಮ ದೇಶದ ಸೈನ್ಯದಲ್ಲಿ ಸೇರಬಯಸುವ ಅಗ್ನಿವೀರರ ಆಯ್ಕೆ ಪ್ರಕ್ರಿಯೆಯು ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವುದು ಜಿಲ್ಲೆಯ ಹೆಮ್ಮೆಯ ಸಂಗತಿ ಮತ್ತು ನಮಗೆ ದೊರೆತ ಅವಕಾಶವಾಗಿದೆ. ಹಾಗಾಗಿ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸುವ ಮೂಲಕ ಯಾವುದೇ ರೀತಿಯಲ್ಲಿ ಅಡಚಣೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

*ಸಹಾಯವಾಣಿ ಕೇಂದ್ರ:*

ನ.13 ರಿಂದ 18 ರ ವರೆಗೆ ನಡೆಯುವ ರ್ಯಾಲಿಯಲ್ಲಿ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಗ್ನಿವೀರರು ರಾಜ್ಯದ ವಿವಿಧೆಡೆಯಿಂದ ಆಗಮಿಸಲಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ನಿರ್ಮಿಸಲಾಗುವ ಸಹಾಯವಾಣಿ ಕೇಂದ್ರಗಳ ಮೂಲಕ ರ್ಯಾಲಿ ನಡೆಯುವ ಸ್ಥಳಕ್ಕೆ ತಲುಪಲು ಸ್ಥಳದ ಮಾಹಿತಿ ನೀಡಬೇಕು. ಅಗತ್ಯವಾದಲ್ಲಿ ನಿಯೋಜಿಸಿರುವ ಬಸ್ ಗಳ ಮೂಲಕ ಕರೆತರಬೇಕು. ಯಾವುದೇ ರೀತಿಯಲ್ಲಿ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

*ತಂಗಲು ವಸತಿ, ಊಟದ ವ್ಯವಸ್ಥೆ:*

ರ್ಯಾಲಿಯಲ್ಲಿ ಭಾಗವಹಿಸಲು ದೂರದ ಪ್ರದೇಶಗಳಿಂದ ಆಗಮಿಸುವ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ನಗರದ ವಾಲ್ಮೀಕಿ ಭವನ, ಡಾ.ಬಾಬು ಜಗನ್ ಜೀವನ್ ರಾಂ ಭವನ, ಜಿಲ್ಲಾ ಕ್ರೀಡಾಂಗಣ, ಸರ್ಕಾರಿ ಅತಿಥಿ ಗೃಹ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯ ರಾತ್ರಿ ತಂಗುದಾಣಗಳಲ್ಲಿ ತಂಗಲು ವಸತಿ ಜೊತೆಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಸಂಬAಧಿಸಿದ ಅಧಿಕಾರಿಗಳು ಬರುವ ಅಭ್ಯರ್ಥಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಅವರ ಪ್ರವೇಶ ಪತ್ರ ಪರಿಶೀಲಿಸಿ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಯವರು, ಅಭ್ಯರ್ಥಿಗಳು ಬೇರೆಡೆ ಎಲ್ಲಿಯೂ ಹೊರವಲಯದಲ್ಲಿ ವಾಸ್ತವ್ಯ ಮಾಡಬಾರದು. ಅವರ ಜೊತೆಯಾಗಿ ಬರುವ ಪೋಷಕರು, ಸ್ನೇಹಿತರಿಗೆ ಅವಕಾಶ ಇರದಿರುವ ಬಗ್ಗೆ ಮಾಹಿತಿ ನೀಡಬೇಕು. ಯಾವುದೇ ರೀತಿಯಲ್ಲಿ ಲೋಪವಾಗದಂತೆ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮೇಲ್ವಿಚಾರಣೆಗೆ ಅಧಿಕಾರಿಗಳ ನೇಮಕ:
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ 5 ದಿನಗಳ ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನದ ಭೋಜನ ಅಲ್ಲಿಯೇ ವ್ಯವಸ್ಥೆ ಮಾಡಬೇಕು. ರಾತ್ರಿಯ ಊಟ ಆಯಾ ವಸತಿ ನಿಲಯಗಳಲ್ಲಿಯೇ ವಿತರಣೆ ಮಾಡಬೇಕು. ಅಭ್ಯರ್ಥಿಯು ಭಾಗವಹಿಸುವ ಶಾರೀರಿಕ ಪರೀಕ್ಷೆ ದಿನದಂದು ಮತ್ತು ಮುಂದಿನ ಹಂತಕ್ಕೆ ಅರ್ಹತೆ ಪಡೆದಾಗ ದೈಹಿಕ, ವೈದ್ಯಕೀಯ ಪರೀಕ್ಷೆ ದಿನದಂದು ಉಟೋಪಚಾರ ಕಲ್ಪಿಸಲಾಗುವುದು. ಮೊದಲನೇ ದಿನವೇ ಅನರ್ಹತೆಯಾದಲ್ಲಿ ಹೊರಹೋಗಲಿದ್ದಾರೆ. ಈ ಎಲ್ಲಾ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ನಡೆಸಲು ಪಾಳಿ ವೇಳೆಯಲ್ಲಿ ನುರಿತ ಅಧಿಕಾರಿಗಳನ್ನು ನೇಮಿಸಬೇಕು ಎಂದು ಹೇಳಿದರು.

*ಸೂಕ್ತ ಬಂದೋಬಸ್ತ್ ಗೆ ನಿರ್ದೇಶನ:*

ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಈಗಾಗಲೇ ಅವರು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಪ್ರವೇಶ ಪತ್ರವನ್ನು ಹಾಜರುಪಡಿಸಿದಲ್ಲಿ ಮಾತ್ರ ಅವರಿಗೆ ಜಿಲ್ಲಾ ಕ್ರೀಡಾಂಗಣಕ್ಕೆ ಒಳಪ್ರವೇಶ ನೀಡಬೇಕು. ಅನಧೀಕೃತ ವ್ಯಕ್ತಿಗಳಿಗೆ ಅವಕಾಶವಿರುವುದಿಲ್ಲ. ಸುತ್ತ-ಮುತ್ತಲಿನ ಜಿಲ್ಲೆಗಳಿಂದ ದ್ವಿ-ಚಕ್ರ ವಾಹನಗಳಲ್ಲಿ ಬರುವ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಸ್ಥಳದಲ್ಲಿ ವಾಹನ ಪಾರ್ಕ್ ಮಾಡಲು ಸೂಚಿಸಬೇಕು. ಬ್ಯಾರೀಕೇಡ್ ವ್ಯವಸ್ಥೆ ಮಾಡಬೇಕು. ಜಿಲ್ಲಾ ಕ್ರೀಡಾಂಗಣದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

*ಸಿಸಿಟಿವಿ ಆಳವಡಿಕೆ:*

ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಜಿಲ್ಲಾ ಕ್ರೀಡಾಂಗಣ, ವಸತಿ ನಿಲಯ, ಒಳ-ಹೊರ ಪ್ರವೇಶ ಸೇರಿದಂತೆ ಅಗತ್ಯ ಕಡೆ ಇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

*ಸ್ವಚ್ಛತಾ ಕ್ರಮ:*

ಜಿಲ್ಲಾ ಕ್ರೀಡಾಂಗಣದ ಸುತ್ತಲೂ ಲೈಟಿಂಗ್ ವ್ಯವಸ್ಥೆ ಮಾಡಬೇಕು. ರ್ಯಾಲಿ ನಡೆಯುವ ದಿನಗಳಂದು ಕ್ರೀಡಾಂಗಣ ಮತ್ತು ವಸತಿ ನಿಲಯಗಳಲ್ಲಿ ಸ್ವಚ್ಛತಾ ಕಾರ್ಯಕ್ಕಾಗಿ ಪೌರಕಾರ್ಮಿಕರನ್ನು ನಿಯೋಜಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಜಿಲ್ಲಾ ಕ್ರೀಡಾಂಗಣದ ಬಳಿ ಅಗತ್ಯ ಅಂಬುಲೆನ್ಸ್, ಅಗ್ನಿಶಾಮಕ ವಾಹನ, ಆರೋಗ್ಯ ಸಮಸ್ಯೆಗಳಿಗೆ ನುರಿತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ನಿಯೋಜಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ನಿರಂತರ ವಿದ್ಯುತ್ ವ್ಯವಸ್ಥೆ, ವಿದ್ಯುತ್ ದೀಪ ಮತ್ತು ಜನರೇಟರ್ ವ್ಯವಸ್ಥೆ, ಬಿಎಸ್ಎನ್ಎಲ್ ಬ್ರಾಡ್ಬ್ಯಾಂಡ್ ಇಂಟರ್ನೆಟ್ ಜೊತೆಗೆ ವೈಫೈ ಮತ್ತು ಎಲ್ಎಎನ್ ಸಂಪರ್ಕ, ಟೆಕ್ನಿಕಲ್ ಸಿಬ್ಬಂದಿ ನಿಯೋಜಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಪ್ರಧಾನ ಕಚೇರಿಯ ಆರ್ಓ ಮತ್ತು ಸೇನಾ ನೇಮಕಾತಿ ಅಧಿಕಾರಿಯಾದ ಮೇಜರ್ ಕಪಿಲ್.ಕೆ ಅವರು ಮಾತನಾಡಿ, ನ.13 ರಿಂದ 18 ರ ವರೆಗೆ ನಡೆಯಲಿರುವ ರ್ಯಾಲಿಯು ಅಂದಿನ ದಿನಗಳಂದು ಬೆಳಿಗ್ಗೆ 05 ಗಂಟೆಯಿAದಲೇ ಆರಂಭವಾಗಲಿದ್ದು, ಓಟ ಸೇರಿದಂತೆ ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಒಳಗೊಂಡು ಸಂಜೆ 06 ಗಂಟೆಯವರೆಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 100 ಅಭ್ಯರ್ಥಿಗಳಲ್ಲಿ 10 ರಿಂದ 20 ಅಭ್ಯರ್ಥಿಗಳು ಅನರ್ಹತೆ ಹೊಂದುವ ಅವಕಾಶ ಇರಲಿದೆ ಎಂದು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯನ್ನು ಯಶಸ್ವಿಗೊಳಿಸಲು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಿದ ಕಾರ್ಯಭಾರವನ್ನು ಆಸಕ್ತಿಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Good news for those who want to join the army: 'Agniveer Army Recruitment' rally in Bellary from today
Share. Facebook Twitter LinkedIn WhatsApp Email

Related Posts

ಜೆಇಇ ಅಡ್ವಾನ್ಸ್‌ಡ್-2026: ಪರೀಕ್ಷಾ ಮಾರ್ಗಸೂಚಿ ಪ್ರಕಟ; ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿವೆ

1 Min Read

BIG NEWS: ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು, ಹೊಸ ರೂಪದ ಕೇಸರಿ ಪೇಟಕ್ಕೆ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

1 Min Read

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ ಶಾಮನೂರು ಪ್ರಮಾಣವಚನ ಸ್ವೀಕಾರ

1 Min Read
Recent News

ಜೆಇಇ ಅಡ್ವಾನ್ಸ್‌ಡ್-2026: ಪರೀಕ್ಷಾ ಮಾರ್ಗಸೂಚಿ ಪ್ರಕಟ; ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿವೆ

BIG NEWS: ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು, ಹೊಸ ರೂಪದ ಕೇಸರಿ ಪೇಟಕ್ಕೆ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

BIG BREAKING: ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ 3ನೇ ಹಂತದ ‘SIR’ ಜಾರಿ: ಚುನಾವಣಾ ಆಯೋಗದ ಮಹತ್ವದ ನಿರ್ಧಾರ | ECI SIR

BREAKING: ಭಾರತದ ಉಳಿದ ಭಾಗಗಳಿಗೆ 3ನೇ ಹಂತದ ‘SIR’ಗೆ ಚಾಲನೆ ನೀಡಿದ ಚುನಾವಣಾ ಆಯೋಗ

State News
KARNATAKA

ಜೆಇಇ ಅಡ್ವಾನ್ಸ್‌ಡ್-2026: ಪರೀಕ್ಷಾ ಮಾರ್ಗಸೂಚಿ ಪ್ರಕಟ; ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿವೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ದೇಶದ ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (IIT) ಪ್ರವೇಶಕ್ಕಾಗಿ ನಡೆಯುವ ‘ಜಂಟಿ ಪ್ರವೇಶ ಪರೀಕ್ಷೆ ಅಡ್ವಾನ್ಸ್‌ಡ್-2026’ (JEE Advanced)…

BIG NEWS: ಶಾಲಾ-ಕಾಲೇಜುಗಳಲ್ಲಿ ಕೇಸರಿ ಶಾಲು, ಹೊಸ ರೂಪದ ಕೇಸರಿ ಪೇಟಕ್ಕೆ ಅವಕಾಶವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ ಶಾಮನೂರು ಪ್ರಮಾಣವಚನ ಸ್ವೀಕಾರ

BIG NEWS : ಬರಡು ಭೂಮಿಗೆ ಗಂಗೆ ಹರಿಸಿದ ‘ಗೃಹಲಕ್ಷ್ಮಿ’ : ಹೊಲದಲ್ಲಿ ಬೋರ್ವೆಲ್ ಕೊರೆಸಿ ಇತರರಿಗೆ ಮಾದರಿಯಾದ ಮಹಿಳೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.