Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !
KARNATAKA

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ !

By kannadanewsnow57

ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತಿಯಿರುವ ರಾಯಚೂರು ಸೇರಿದಂತೆ ಕೊಪ್ಪಳ, ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯನಗರ ಹಾಗೂ ಬೀದರ ಜಿಲ್ಲೆಗಳ ಯುವಕರಿಗೆ ಅರ್ಜಿ ಸಲ್ಲಿಸಲು ಮಾರ್ಚ 1ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಆಸಕ್ತ ಯುವಕರು ಸೇನೆಯ ಅಧಿಕೃತ ವೆಬ್ಸೈಟ್ https://www.joinindianarmy.nic.in/Authentication.aspx ಗೆ ಭೇಟಿ ನೀಡಿ ಅಲ್ಲಿ ಅಗ್ನಿಪಥ್ ಟ್ಯಾಬ್ ಕ್ಲಿಕ್ ಮಾಡಿ, ಆಧಾರ್ ಅಥವಾ 10ನೇ ತರಗತಿ ಸರ್ಟಿಫಿಕೇಟ್ ಬಳಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಶುಲ್ಕ 250 ರೂ. ನಿಗದಿಪಡಿಸಲಾಗಿದ್ದು, ಅಗ್ನಿವೀರ್ ಜನರಲ್ ಡ್ಯೂಟಿ ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿಯಲ್ಲಿ ಕನಿಷ್ಠ ಶೇ.45 ರಷ್ಟು ಅಂಕಗಳೊAದಿಗೆ ಉತ್ತೀರ್ಣರಾಗಿರಬೇಕು. ಅಗ್ನಿ ವೀರ್ ಟೆಕ್ನಿಕಲ್ಗೆ ಅರ್ಜಿ ಸಲ್ಲಿಸಲು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣ ಅಥವಾ 10ನೇ ತರಗತಿಯ ಜೊತೆಗೆ ಐಟಿಐ ಮುಗಿಸಿರಬೇಕು. ಅಗ್ನಿವೀರ್ ಕ್ಲರ್ಕ್ ಹಾಗೂ ಸ್ಟೋರ್ ಕೀಪರ್ ಹುದ್ದೆಗಳಿಗೆ ಯಾವುದೇ ವಿಭಾಗದ ಪಿಯುಸಿಯಲ್ಲಿ ಕನಿಷ್ಠ ಶೇ.60 ಅಂಕಗಳನ್ನು ಪಡೆದಿರಬೇಕು. ಇಂಗ್ಲಿಷ್ ಮತ್ತು ಗಣಿತ ವಿಷಯ ಕಡ್ಡಾಯವಾಗಿರುತ್ತದೆ. ಅಗ್ನಿವೀರ್ ಟ್ರೇಡ್ಸ್ಮನ್ ಹುದ್ದೆಗೆ 8 ನೇ ಅಥವಾ 10ನೇ ತರಗತಿ ಉತ್ತೀರ್ಣರಾಗಿರಬೇಕು. ಎರಡು ಹಂತಗಳಲ್ಲಿ ಸಾಮರ್ಥ್ಯದ ಪರೀಕ್ಷೆ ನಡೆಯಲ್ಲಿದ್ದು ಮೊದಲಿಗೆ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ಇರುತ್ತದೆ. ಇದರಲ್ಲಿ ಉತ್ತೀರ್ಣರಾದವರಿಗೆ ಮುಂದಿನ ಹಂತಕ್ಕೆ ಅವಕಾಶವಿರುತ್ತದೆ. ಎರಡನೇ ಹಂತದಲ್ಲಿ ನೇಮಕಾತಿ ರ್ಯಾಲಿಯಲ್ಲಿ ದೈಹಿಕ ಪರೀಕ್ಷೆ ಇರುತ್ತದೆ. ಕ್ಲರ್ಕ್ ಹುದ್ದೆಗೆ ಟೈಪಿಂಗ್ ಟೆಸ್ಟ್ ಇರುತ್ತದೆ.

ಮಾಜಿ ಸೈನಿಕರ ಮನವಿ: ಭಾರತೀಯ ಸೇನೆಯಿಂದ ಪ್ರಸ್ತುತ 25 ಸಾವಿರಕ್ಕೂ ಹೆಚ್ಚು ಅಗ್ನಿವೀರ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಈ ಬಾರಿಯ ನೇಮಕಾತಿಯಲ್ಲಿ 8ನೇ ತರಗತಿಯಿಂದ ಪಿಯುಸಿ ವರೆಗಿನ ನಾಲ್ಕು ವಿಭಾಗಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಭಾರತ ಸೇನೆಯಲ್ಲಿ ಆಯ್ಕೆಯಾದ ಅಗ್ನಿ ವೀರರಿಗೆ ಆಕರ್ಷಕ ವೇತನ ಮತ್ತು ಸವಲತ್ತುಗಳಿವೆ. ಸೇವಾ ನಿಧಿ ಪ್ಯಾಕೇಜ್ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9591208111ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ರಾಯಚೂರು ಸೇರಿದಂತೆ ಕೊಪ್ಪಳ, ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯನಗರ, ಬೀದರ ಜಿಲ್ಲೆಗಳ ಯುವಕರು ಭಾರತೀಯ ಸೇನೆ ನೀಡಿರುವ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಯೋಧರಾದ ಚೆನ್ನಾರೆಡ್ಡಿ ಅವರು ರಾಯಚೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳ ಯುವಕರಲ್ಲಿ ಮನವಿ ಮಾಡಿದ್ದಾರೆ.

Good news for those who want to join the army: Applications invited for Agniveer posts!
Share. Facebook Twitter LinkedIn WhatsApp Email

Related Posts

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

2 Mins Read

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

2 Mins Read

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

1 Min Read
Recent News

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

​2025ರಲ್ಲಿ ಜಾಗತಿಕ ಮಟ್ಟದಲ್ಲಿ ದಾಖಲೆಯ ಸಶಸ್ತ್ರ ಸಂಘರ್ಷಗಳು: ಎರಡನೇ ವಿಶ್ವಯುದ್ಧದ ನಂತರದ ಗರಿಷ್ಠ ಮಟ್ಟಕ್ಕೆ ಏರಿಕೆ!

State News
KARNATAKA

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

By kannadanewsnow57 KARNATAKA 2 Mins Read

ನೀವೇನಾದರೂ ಬಾಡಿಗೆ ಮನೆಯಲ್ಲಿದ್ದರೆ ಅಥವಾ ಈ ಹಿಂದೆ ಇದ್ದಿದ್ದರೆ, ಮನೆ ಮಾಲೀಕರು ಯಾವಾಗಲೂ ಕೇವಲ 11 ತಿಂಗಳ ಅವಧಿಗೆ ಮಾತ್ರ…

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.