ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆಗುವುದು ಬಾಕಿ ಇದೆ. ಸಚಿವ ಸ್ಥಾನವನ್ನು ಅನೇಕ ಆಕಾಂಕ್ಷಿಗಳು ನಿರೀಕ್ಷೆಯಲ್ಲಿದ್ದಾರೆ. ಹೀಗೆ ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಬೊಮ್ಮಾಯಿ ಶೀಘ್ರವೇ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ.
BIGG NEWS : ಮುರುಘಾಮಠದಲ್ಲಿ ನಾಲ್ಕೂವರೆ ವರ್ಷದ ಮಗು ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಇಂದು ಈ ಕುರಿತಂತೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಸಚಿವ ಸಂಪುಟ ವಿಸ್ತರಣೆ ಬಾಕಿ ಇದೆ. ಈ ಸಂಬಂಧ ಚರ್ಚಿಸೋದಕ್ಕಾಗಿ ಜನಸಂಕಲ್ಪ ಯಾತ್ರೆಯ ನಡುವೆಯೂ ದೆಹಲಿಗೆ ತೆರಳುತ್ತಿದ್ದೇನೆ ಎಂದಿದ್ದಾರೆ.
ಶೀಘ್ರವೇ ದೆಹಲಿಗೆ ತೆರಳಲಿದ್ದು, ಬಿಜೆಪಿಯ ಹೈಕಮಾಂಡ್ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಿದ್ದೇನೆ. ಈ ಬಳಿಕ ಶೀಘ್ರವೇ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಿದ್ದೇನೆ. ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡೋದಾಗಿ ಹೇಳಿದ್ದಾರೆ. ಈ ಮೂಲಕ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ನೀಡಿದ್ದಾರೆ.