ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಹೊಸದಾಗಿ ಪಿಯು ಕಾಲೇಜು ತೆರೆಯಲು ಇಚ್ಚೆ ಇದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಪದವಿ ಪೂರ್ವದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿಯಮಗಳು 2024ರ ನಿಯಮ 5 ರನ್ವಯ 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟಕಂಪನಿ/ non-profit motive limited-liability partnership ರವರುಗಳು ಅರ್ಜಿಗಳನ್ನು ಆನ್-ಲೈನ್ (online)ಮೂಲಕ “ಅರ್ಜಿ ನಮೂನೆ” (Form-1 ಮತ್ತು Form-lll) ರಲ್ಲಿ ದಿನಾಂಕ:30-12-2024 ಸಂಜೆ 05:00 ರಿಂದ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ ವೆಬ್‌ಸೈಟ್ https://pue.karnataka.gov.in/ ಇಲ್ಲಿಗೆ ಭೇಟಿ ನೀಡಿ ಪಡೆಯಬಹುದಾಗಿದೆ.
2023-24 ಮತ್ತು 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಆನ್-ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ/ಟ್ರಸ್ಟಕಂಪನಿ/ non-profit motive limited-liability partnership ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂಬುದಾಗಿ ತಿಳಿಸಿದೆ.
BREAKING: ಎರಡು ಕುಟುಂಬಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ಮಹಿಳೆಯನ್ನೇ ಕೊಲೆ
ಆಂದೋಲ ಶ್ರೀಗಳು ವೀರಶೈವ ಲಿಂಗಾಯತ ರಲ್ಲವೇ?: ಸಮಾಜದ ಮುಖಂಡ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ