ಹಾವೇರಿ : ಸಮಾಜ ಕಲ್ಯಾಣ ಇಲಾಖೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ 2022-23ನೇ ಸಾಲಿಗೆ ಯು.ಪಿ.ಎಸ್.ಸಿ, ಕೆ.ಎ.ಎಸ್, ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ, ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಲ್ಪಸಂಖ್ಯಾತ ಅಭ್ಯರ್ಥಿಗಳು ವೆಬ್ಸೈಟ್ sw.kar.nic.inನಲ್ಲಿ ದಿನಾಂಕ 20-09-2022 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ 08375-234505 ಅಥವಾ ಹಾವೇರಿ, ಬ್ಯಾಡಗಿ, ರಾಣೇಬೆನ್ನೂರು, ಸವಣೂರು, ಹಿರೇಕೆರೂರು, ಹಾನಗಲ್ ಮತ್ತು ಶಿಗ್ಗಾಂವ್ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ವಿಪಕ್ಷ ನಾಯಕ ಸಿದ್ಧರಾಮಯ್ಯ’ ವಿರುದ್ಧ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ‘ಟ್ವಿಟ್ಟರ್ ವಾರ್’.!