ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಾತಿಗೆ ( Teacher Recruitment ) ಕಳೆದ ಮೇನಲ್ಲಿ ನಡೆಸಲಾಗಿದ್ದ ಸಿಇಟಿ ಫಲಿತಾಂಶವನ್ನು ( CET Results ), ಆಗಸ್ಟ್ ಅಂತ್ಯದೊಳಗೆ ಪ್ರಕಟಿಸಲಾಗುವುದು ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ತಿಳಿಸಿದ್ದಾರೆ.

ನ್ಯಾಯಾಲಯದ ನಿಲುವು ತಪ್ಪಾಗದ ಹೊರತು ‘ಖುಲಾಸೆ ತೀರ್ಪಿ’ನಲ್ಲಿ ಹಸ್ತಕ್ಷೇಪ ಸರಿಯಲ್ಲ ; ಸುಪ್ರೀಂಕೋರ್ಟ್

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ ಗುರಿ ಇದೆ. ಅಕ್ಟೋಬರ್ ಅಂತ್ಯದೊಳಗೆ ನೇಮಕ ಪ್ರಕ್ರಿಯೆಯ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನಿರ್ಲಕ್ಷ್ಯವೋ.? ಶಾಪವೋ.? ‘Thalassemia’ದಿಂದ ಬಳಲುತ್ತಿದ್ದ 3 ವರ್ಷದ ಪುಟ್ಟ ಕಂದನಿಗೆ ‘HIV’

ಇನ್ನು ನವೆಂಬರ್ 6ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ. ಅಲ್ಲದೇ ಪ್ರತಿ ವರ್ಷ ಎರಡು ಬಾರಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಬೇಕಾಗುತ್ತದೆ. ಆದ್ರೇ.. ಈ ವರ್ಷ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಬರುವ ನವೆಂಬರ್ 6ರಂದು ಒಂದೇ ಟಿಇಟಿ ನಡೆಸಲಾಗುವುದು ಎಂದು ಹೇಳಿದ್ದಾರೆ.

Share.
Exit mobile version