ಬೆಂಗಳೂರು: 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹೆಚ್ಚುವರಿಯಾಗಿ 5,000 ಅತಿಥಿ ಶಿಕ್ಷಕರ ನೇಮಕಾತಿಗೆ ( Guest Teacher Recruitment ) ರಾಜ್ಯ ಸರ್ಕಾರ ಆದೇಶಿಸಿದೆ. ಇದಲ್ಲದೇ ಅತಿಥಿ ಶಿಕ್ಷಕರ ಗೌರವಧನವನ್ನು ಹೆಚ್ಚಿಸಿ ಆದೇಶಿಸಿದೆ.
ಈ ಕುರಿತಂತೆ ಶಿಕ್ಷಣ ಇಲಾಖೆಯ ( Education Department ) ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸಮೂರ್ತಿಯವರು ನಡವಳಿಯನ್ನು ಹೊರಡಿಸಿದ್ದು, 2022-23ನೇ ಶೈಕ್ಷಣಿಕ ಸಾಲಿಗೆ ಉತ್ತಮ ಗುಣಮಟ್ಟದ ಶೈಕ್ಷಣಿಕ ಬಲವರ್ಧನೆಯ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 22,000 ಹಾಗೂ ಪ್ರೌಢ ಶಾಲೆಗಳಲ್ಲಿ 5,078 ಸೇರಿದಂತೆ ಒಟ್ಟು 27,078 ಅತಿಥಿ ಶಿಕ್ಷಕರುಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಲಾಗಿರುತ್ತದೆ.
ದಿನಾಂಕ 30-04-2022 ಮತ್ತು 10-05-2022ರ ಪತ್ರದಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 8000 ಅತಿಥಿ ಶಿಕ್ಷಕರನ್ನು, 2000 ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳೋದಕ್ಕೆ ಕೋರಿರುತ್ತಾರೆ. ಈ ಪ್ರಸ್ತಾವನೆ ಪರಿಶೀಲಿಸಲಾಗಿದೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಪ್ರೌಢ ಶಾಲೆಗಳಲ್ಲಿ ಹೆಚ್ಚುವರಿಯಾಗಿ 4000 ಅತಿಥಿ ಶಿಕ್ಷಕರನ್ನು ಹಾಗೂ ಪ್ರೌಢಶಾಲೆಗಳಲ್ಲಿ ಹೆಚ್ಚುವರಿಯಾಗಿ 1000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶಿಸಿದ್ದಾರೆ.
ಕಾರವಾರದಲ್ಲಿ ಮದುವೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಓರ್ವ ಮಹಿಳೆ ಸಾವು, ನಾಲ್ವರ ಸ್ಥಿತಿ ಗಂಭೀರ
ಇನ್ನೂ ಸರ್ಕಾರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರ ಗೌರವಧವನ್ನು ರೂ.7,500ರಿಂದ ರೂ.10,000 ಸಾವಿರಕ್ಕೆ ಹೆಚ್ಚಿಸಲಾಗಿದೆ. ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಗೌರವಧವನ್ನು ರೂ.8,000 ದಿಂದ ರೂ.10,500ಕ್ಕೆ ಹೆಚ್ಚಿಸಿ ಆದೇಶಿಸಿದೆ.
