ಬೆಂಗಳೂರು: ರಾಜ್ಯ ಸರ್ಕಾರದಿಂದ ಪಟ್ಟಣ ಪಂಚಾಯ್ತಿ, ಪುರಸಭೆ ಮತ್ತು ನಗರಸಭೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಖಾಯಂ ನೌಕರರಿಗೆ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿ ಜಾರಿಗೊಳಿಸಿ ಆದೇಶಿಸಿದೆ.
ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 01.03.2018 ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 19.04.2018 ರಲ್ಲಿನ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ / ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ: 01.07.2017 ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಆದರೆ, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ದಿನಾಂಕ: 01.04.2018 ರಿಂದ ಜಾರಿಗೆ ಬರುವಂತೆ ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ.
ದಿನಾಂಕ: 22.07.2024ರ ಆದೇಶದಲ್ಲಿ, 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಿ, ಅದರಂತೆ ರಾಜ್ಯ ಸರ್ಕಾರಿ ನೌಕರರ ಮುಖ್ಯವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಹಾಗೂ ಪಿಂಚಣಿಯನ್ನು ದಿನಾಂಕ: 01.07.2022 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿರುತ್ತದೆ. ಈ ಆದೇಶದ ಕಂಡಿಕೆ (8) ರಲ್ಲಿ ಅನ್ವಯಿಸುವ ಬದಲಾವಣೆಗಳೊಂದಿಗೆ ಈ ಮೇಲಿನ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಭೋದಕೇತರ ಸಿಬ್ಬಂದಿಗಳಿಗೂ ಸಹಾ ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ ಎಂದು ಹೇಳಿದ್ದಾರೆ.
ದಿನಾಂಕ: 17.08.2024ರ ಅಧಿಸೂಚನೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು 2024ನ್ನು ರಚಿಸಲಾಗಿರುತ್ತದೆ.
ದಿನಾಂಕ: 23.08.2024ರ ಆದೇಶದಲ್ಲಿನ ಕಂಡಿಕೆ 11.1 ರಲ್ಲಿ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಭೋದಕೇತರ ಸಿಬ್ಬಂದಿಗಳಿಗೂ ಸಹಾ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಹೊರಡಿಸುತ್ತವೆ ಎಂದು ತಿಳಿಸಲಾಗಿರುತ್ತದೆ.
ದಿನಾಂಕ: 02.09.2024ರ ಪತ್ರದಲ್ಲಿ ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ರವರು, ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024, ದಿನಾಂಕ: 22.07.2024 ರ ಆದೇಶದಲ್ಲಿ, 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿಗಳನ್ನು ಅಂಗೀಕರಿಸಿ, ಕಂಡಿಕೆ (8) ರಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳಿಗೆ ಈ ಸೌಲಭ್ಯವನ್ನು ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿರುತ್ತಾರೆ .
ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಆಇ 21 ಎಸ್‌ಆರ್‌ಪಿ 2024, ದಿನಾಂಕ: 17.08.2024 ಮತ್ತು 23.08.2024 ರ ಆದೇಶದಲ್ಲಿ, ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗಧಿಪಡಿಸುವ ಕುರಿತು ವಿಸ್ತಾರವಾದ ಆದೇಶವನ್ನು ಹೊರಡಿಸಲಾಗಿರುತ್ತದೆ. ಸದರಿ ಆದೇಶದ ಕಂಡಿಕೆ (11.1) ರಲ್ಲಿ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಭೋದಕೇತರ ಸಿಬ್ಬಂದಿಗಳಿಗೂ ಸಹಾ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಆದೇಶ ಹೊರಡಿಸುವಂತೆ ನಮೂದಿಸಲಾಗಿರುತ್ತದೆ.
ಸರ್ಕಾರದ ಆದೇಶ ಸಂಖ್ಯೆ: ಆಇ / ಪಿಇಎನ್ / 262 / 2024, ದಿನಾಂಕ: 28.08.2024 ರಲ್ಲಿ ರಾಜ್ಯ ಸರ್ಕಾರಿ ನಿವೃತ್ತಿದಾರರಿಗೆ ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿರುತ್ತದೆ. ಆದ್ದರಿಂದ, 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 2024ರ ಪರಿಷ್ಕೃತ ಪಿಂಚಣಿ ಶ್ರೇಣಿಯನ್ನು ಪೌರಸೇವಾ ವೃಂದದ ಪಿಂಚಣಿದಾರರಿಗೆ ಯಥಾವತ್ತಾಗಿ ವಿಸ್ತರಿಸಲು ಆದೇಶ ಹೊರಡಿಸುವಂತೆ ಜಂಟಿ ನಿರ್ದೇಶಕರು (ಹಣಕಾಸು) ಪೌರಾಡಳಿತ ನಿರ್ದೇಶನಲಾಯ ಇವರು ಕೋರಿರುತ್ತಾರೆ.
ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ರವರ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.
7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವಂತೆ, ಸದರಿ ಆದೇಶಗಳಲ್ಲಿ ತಿಳಿಸಿರುವಂತೆ, 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿಗಳನ್ನು ಮತ್ತು ಸೌಲಭ್ಯಗಳನ್ನು ಯಥಾವತ್ತಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಖಾಯಂ ನೌಕರರುಗಳಿಗೂ ಸಹಾ ಯಥಾವತ್ತಾಗಿ ಜಾರಿಗೊಳಿಸಲು ಆದೇಶಿಸಿದೆ. ಇದಕ್ಕೆ ತಗಲುವ ವೆಚ್ಚವನ್ನು ರಾಜ್ಯ ಸಂಚಿತ ನಿಧಿಯಿಂದ ಭರಿಸತಕ್ಕದ್ದು ಎಂದು ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚಿಸಿ: ಆರ್.ಅಶೋಕ ಆಗ್ರಹ
BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!