ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ (ಕೆಎಸ್ಆರ್ ಬೆಂಗಳೂರು) ಮತ್ತು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ಸಂಚರಿಸುವ ಶತಾಬ್ದಿ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 12027/12028) ರೈಲಿಗೆ ಹೆಚ್ಚುವರಿ ಹವಾ ನಿಯಂತ್ರಿತ ಚೇರ್ ಕಾರ್ (AC Chair Car) ಬೋಗಿಯನ್ನು ಅಳವಡಿಸಲು ನಿರ್ಧರಿಸಲಾಗಿದೆ.
ಕೆಎಸ್ಆರ್ ಬೆಂಗಳೂರಿನಿಂದ ಹೊರಡುವ ಶತಾಬ್ದಿ ಎಕ್ಸ್ ಪ್ರೆಸ್ ಮತ್ತು ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ ಶತಾಬ್ದಿ ಎಕ್ಸ್ ಪ್ರೆಸ್ ಎರಡೂ ರೈಲುಗಳಿಗೆ ಜುಲೈ 27, 2025 ರಿಂದ ಈ ಹೆಚ್ಚುವರಿ ಬೋಗಿ ಲಭ್ಯವಿರಲಿದೆ.
ಈ ಹಿಂದೆ ಶತಾಬ್ದಿ ಎಕ್ಸ್ ಪ್ರೆಸ್ ರೈಲುಗಳು 17 ಬೋಗಿಗಳನ್ನು ಹೊಂದಿದ್ದವು. ಹೆಚ್ಚುವರಿ ಒಂದು ಬೋಗಿಯ ಸೇರ್ಪಡೆಯೊಂದಿಗೆ, ರೈಲಿನ ಒಟ್ಟು ಬೋಗಿಗಳ ಸಂಖ್ಯೆ ಈಗ 18ಕ್ಕೆ ಏರಿಕೆಯಾಗಲಿದೆ. ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಆಸನಗಳು ಲಭ್ಯವಾಗಲಿದ್ದು, ಇನ್ನಷ್ಟು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಅನುಭವ ದೊರೆಯಲಿದೆ.
BREAKING: ಮಡಿಕೇರಿಯಲ್ಲಿ ಲಾರಿ-ಕಾರು ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ