ಬೆಂಗಳೂರು : ರಾಜ್ಯದ ರೈಲು ಪ್ರಯಾಣಿಕರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಿಹಿಸುದ್ದಿ ನೀಡಿದ್ದು, ಈ ತಿಂಗಳಿನಿಂದಲೇ ಬೆಂಗಳೂರಿನಿಂದ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ರೈಲುಗಳಲ್ಲಿ ಪ್ರಯಾಣಿಕರ ಜನಸಂದಣಿಯನ್ನು ತಪ್ಪಿಸಿ, ಅವರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದರೆ.
ಪ್ರಯಾಣಿಕರು ಈ ವಿಶೇಷ ರೈಲುಗಳ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ವಿನಂತಿಸಿಕೊಂಡಿದ್ದಾರೆ.