ಬೆಂಗಳೂರು: ಕೆ ಎಸ್ ಆರ್ ಟಿಸಿ ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿ ಇದ್ದಂತ ನೌಕರರಿಗೆ ರಾಜ್ಯದ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಅಂತರ ನಿಗಮ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತೆ ಎಂದಿದ್ದಾರೆ.
ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪಯಿನಾಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಭಂದಿಸಿದ ಖಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.
ನೌಕರರ ಪತಿ ಅಥವಾ ಪತ್ನಿಯು ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಸ್ವಾಮ್ಯದ ಸಂಸ್ಥೆಯ ಅಧಿಕಾರಿ/ನೌಕರರಾಗಿ ಬೇರೆ ಬೇರೆ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಿದ್ದು, ಒಟ್ಟು ಶೇಡಕ 10 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.