Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಕಳೆದ 4 ವರ್ಷದಲ್ಲಿ 2072 ಅತ್ಯಾಚಾರ, 18,834 ಲೈಂಗಿಕ ಕಿರುಕುಳ ಕೇಸ್ ದಾಖಲು !

23/03/2026 8:40 AM

ಕರಾಚಿ: 80ಕ್ಕೂ ಹೆಚ್ಚು ಬಲಿ ಪಡೆದಿದ್ದ ಮಾಲ್‌ನಲ್ಲಿ ಮತ್ತೆ ಭೀಕರ ಅಗ್ನಿ ಅವಘಡ; ತಪ್ಪದ ಬೆಂಕಿ ಭೀತಿ

23/03/2026 8:30 AM

ಹಾರ್ಮುಜ್ ಜಲಸಂಧಿ ದಾಟಲು ಪ್ರತಿ ಹಡಗಿಗೆ $2 ಮಿಲಿಯನ್ ಸುಂಕ? ವದಂತಿಗಳಿಗೆ ತೆರೆ ಎಳೆದ ಇರಾನ್

23/03/2026 8:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಚಾರಣಿಗ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಚಾರಣಪಥಗಳ ಆನ್ ಲೈನ್ ಟಿಕೆಟ್’ಗೆ ಆರಂಭ
KARNATAKA

‘ಚಾರಣಿಗ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಚಾರಣಪಥಗಳ ಆನ್ ಲೈನ್ ಟಿಕೆಟ್’ಗೆ ಆರಂಭ

By kannadanewsnow0902/07/2024 7:02 PM

ಮಂಗಳೂರು: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಚಾರಣಕ್ಕೆ ಈ ಆಗಸ್ಟ್ ನಿಂದ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಸಾಮಾನ್ಯವಾಗಿ ಮಳೆಗಾಲದಲ್ಲಿ ಯಾವುದೇ ಚಾರಣ ಪಥಕ್ಕೆ ಪ್ರವೇಶ ನಿರಾಕರಿಸಲಾಗುತ್ತದೆ. ಕಾರಣ ಚಾರಣಿಗರು ಅಪಾಯಕ್ಕೆ ಈಡಾಗುವ ಸಂಭವ ಹೆಚ್ಚಾಗಿರುತ್ತದೆ, ಜೊತೆಗೆ ಇಲ್ಲಿನ ಜೀವರಾಶಿ ಮತ್ತು ಮೊಳಕೆಯೊಡೆಯುವ ಸಸ್ಯರಾಶಿಗೂ ತೊಂದರೆ ಆಗುತ್ತದೆ ಹೀಗಾಗಿ ಆಗಸ್ಟ್ ನಿಂದ ಚಾರಣಕ್ಕೆ ಮರು ಚಾಲನೆ ನೀಡುವುದಾಗಿ ತಿಳಿಸಿದರು.

ಈಗಾಗಲೇ ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಆದೇ ರೀತಿ ಕುದುರೆಮುಖ ಶಿಖರ, ನೇತ್ರಾವತಿ ಶಿಖರ, ಕೊಡಚಾದ್ರಿ, ಕುರಿಂಜಲ್, ಕಂಗಡಿಕಲ್, ನರಸಿಂಹ ಪರ್ವತಗಳಲ್ಲಿ ಅರಣ್ಯ ಇಲಾಖೆ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿದೆ. ಇದಲ್ಲದೆ ಎತ್ತಿನಭುಜ ಸೇರಿದಂತೆ ಕೆಲವು ಕಡೆಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಇರುವುದಿಲ್ಲ. ಈ ಎಲ್ಲ ಚಾರಣ ಪಥಗಳಿಗೂ ಒಂದೇ ವೆಬ್ ಸೈಟ್ ನಲ್ಲಿ ಟಿಕೆಟ್ ಬುಕ್ ಮಾಡಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.

ಚಾರಣಿಗರ ಸಂಖ್ಯೆಗೆ ಮಿತಿ:

ಕೆಲವು ಪ್ರವಾಸಿ ಸಂಸ್ಥೆಗಳು (ಟೂರ್ ಆಪರೇಟರ್ ಗಳು) ಚಾರಣಪಥಗಳ ಬಗ್ಗೆ ಯುವಜನರಲ್ಲಿ ಅತಿಯಾದ ಆಸಕ್ತಿ ಕೆರಳಿಸುತ್ತಿದ್ದು, ಇದರ ಪರಿಣಾಮವಾಗಿ ಚಾರಣಪಥಗಳಲ್ಲಿ ವಾರಾಂತ್ಯದಲ್ಲಿ ದಟ್ಟಣೆ ಹೆಚ್ಚುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯೂ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರಕೃತಿ, ಪರಿಸರ ಉಳಿಸಲು ಕೆಲವು ಕಠಿಣ ಕ್ರಮ ಅತ್ಯಗತ್ಯ ಎಂದು ಹೇಳಿದರು.

ಪ್ರತಿಯೊಂದು ಚಾರಣ ಪಥದಲ್ಲೂ ಅದರ ವಿಸ್ತಾರ, ಅಲ್ಲಿರುವ ಗೈಡ್ ಮತ್ತು ಇತರ ಮೂಲಭೂತ ಸೌಲಭ್ಯವನ್ನು ಗಮನದಲ್ಲಿಟ್ಟುಕೊಂಡು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗುವುದು. ಯಾವುದೇ ಚಾರಣಪಥದಲ್ಲಿ ಸೀಮಿತ ಸಂಖ್ಯೆಗಿಂತ ಹೆಚ್ಚಿನ ಚಾರಣಿಗರಿಗೆ ಅವಕಾಶವಾಗದಂತೆ ತಂತ್ರಜ್ಞಾನದ ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ಮೂರನೆ ವ್ಯಕ್ತಿ ತಪಾಸಣೆ

ಒಂದೊಮ್ಮೆ ಯಾವುದೇ ಚಾರಣ ಪಥದಲ್ಲಿ ಹೆಚ್ಚಿನ ಸಂಖ್ಯೆಯ ಚಾರಣಿಗರಿಗೆ ಅವಕಾಶ ನೀಡಲಾಗುತ್ತಿದೆ ಎಂದು ದೂರು ಬಂದರೆ, ಈ ಬಗ್ಗೆ ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಒಂದೇ ವೆಬ್ ಸೈಟ್ ನಲ್ಲಿ ವಿವಿಧ ಚಾರಣ ಪಥಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಇರುವ ಕಾರಣ, ಒಂದು ಚಾರಣ ಪಥದಲ್ಲಿ ಟಿಕೆಟ್ ಸಿಗದಿದ್ದರೆ ಮತ್ತೊಂದಕ್ಕೆ ಟಿಕೆಟ್ ಕಾಯ್ದಿರಿಸುವ ಅವಕಾಶವೂ ಇರುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ವಿವರಿಸಿದರು.

ಮಂಗಳೂರು ವೃತ್ತವನ್ನು ಅರಣ್ಯ ಒತ್ತುವರಿ ಮುಕ್ತ ವಲಯವಾಗಿ ಘೋಷಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕಳೆದ ವರ್ಷ ಮಂಗಳೂರು ವೃತ್ತದಲ್ಲಿ ಸುಮಾರು 26.5 ಲಕ್ಷ ಸಸಿಗಳನ್ನು ನೆಡಲಾಗಿತ್ತು, ಈ ಬಾರಿ 12.5 ಲಕ್ಷ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ, ಇದರ ಜೊತೆಗೆ ಕಳೆದ ವರ್ಷ ನೆಟ್ಟ ಸಸಿಗಳ ಪಾಲನೆ ಪೋಷಣೆ ಮಾಡಲಾಗುವುದು ಎಂದು ಈಶ್ವರ ಖಂಡ್ರೆ ವಿವರಿಸಿದರು.

ನಾಳೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವನಮಹೋತ್ಸವ ಮತ್ತು ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದ್ದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರ ಮತ್ತು ಜೀವವೈವಿಧ್ಯ ಪ್ರಶಸ್ತಿ ಪ್ರದಾನ ಮಾಡುವರು ಎಂದು ತಿಳಿಸಿದರು.

BIG UPDATE: ಉತ್ತರ ಪ್ರದೇಶದಲ್ಲಿ ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಆದಿತ್ಯನಾಥ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿಕಾ ಪೊಣಚ್ಚ ಮತ್ತು ಭುವನ್ ಪೊನ್ನಣ್ಣ | Actress Harshika Poonacha

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಕಳೆದ 4 ವರ್ಷದಲ್ಲಿ 2072 ಅತ್ಯಾಚಾರ, 18,834 ಲೈಂಗಿಕ ಕಿರುಕುಳ ಕೇಸ್ ದಾಖಲು !

23/03/2026 8:40 AM1 Min Read

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM1 Min Read

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM3 Mins Read
Recent News

SHOCKING : ರಾಜ್ಯದಲ್ಲಿ ಕಳೆದ 4 ವರ್ಷದಲ್ಲಿ 2072 ಅತ್ಯಾಚಾರ, 18,834 ಲೈಂಗಿಕ ಕಿರುಕುಳ ಕೇಸ್ ದಾಖಲು !

23/03/2026 8:40 AM

ಕರಾಚಿ: 80ಕ್ಕೂ ಹೆಚ್ಚು ಬಲಿ ಪಡೆದಿದ್ದ ಮಾಲ್‌ನಲ್ಲಿ ಮತ್ತೆ ಭೀಕರ ಅಗ್ನಿ ಅವಘಡ; ತಪ್ಪದ ಬೆಂಕಿ ಭೀತಿ

23/03/2026 8:30 AM

ಹಾರ್ಮುಜ್ ಜಲಸಂಧಿ ದಾಟಲು ಪ್ರತಿ ಹಡಗಿಗೆ $2 ಮಿಲಿಯನ್ ಸುಂಕ? ವದಂತಿಗಳಿಗೆ ತೆರೆ ಎಳೆದ ಇರಾನ್

23/03/2026 8:19 AM

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM
State News
KARNATAKA

SHOCKING : ರಾಜ್ಯದಲ್ಲಿ ಕಳೆದ 4 ವರ್ಷದಲ್ಲಿ 2072 ಅತ್ಯಾಚಾರ, 18,834 ಲೈಂಗಿಕ ಕಿರುಕುಳ ಕೇಸ್ ದಾಖಲು !

By kannadanewsnow5723/03/2026 8:40 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಎಗ್ಗಿಲ್ಲದೆ ಸಾಗುತ್ತಿವೆಯೇ ಎಂಬ ಆತಂಕ ಮೂಡುತ್ತಿದೆ. ಕಳೆದ ನಾಲ್ಕು ವರ್ಷಗಳ ಅಂಕಿಅಂಶಗಳನ್ನು ಗಮನಿಸಿದರೆ,…

ಅತ್ಯಾಚಾರ ಸಂತ್ರಸ್ತೆಯ 34 ವಾರಗಳ `ಭ್ರೂಣ ಗರ್ಭಪಾತ’ಕ್ಕೆ ಕರ್ನಾಟಕ ಹೈಕೋರ್ಟ್ ನಕಾರ !

23/03/2026 8:17 AM

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM

ವಾಹನ ಸವಾರರಿಗೆ ಬಿಗ್ ಶಾಕ್ : ಏಪ್ರಿಲ್ 1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಏರಿಕೆ

23/03/2026 7:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.