2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅಲ್ಪ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರ ಏಳಿಗೆಗಾಗಿ ಸಮುದಾಯ ಆಧಾರಿತ ತರಬೇತಿ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್‌ಸಿ, ಬಿಪಿಒ ಮತ್ತು ಇತರೆ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ ಹೆವಿ ವೆಹಿಕಲ್ ಡ್ರೈವಿಂಗ್, ಡ್ರೋನ್ ಚಾಲನೆ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್ ಗಳಿಗೆ ನಿಗಮದ ವತಿಯಿಂದ ತರಬೇತಿಯನ್ನು ನೀಡಲಾಗುತ್ತದೆ.
ರಾಜ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ನಿವಾಸಿಯಾಗಿರುವ, 18-45 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಆಯ್ಕೆಯಾದವರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು. ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳಲ್ಲಿ ತರಬೇತಿ ಪಡೆದಿರಬಾರದು.
ಹೆಚ್ಚಿನ ಮಾಹಿತಿಗಾಗಿ https://kmdconline.krnataka.gov.in ಅಥವಾ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 8277944213, 08194-226412 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.