ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ – ಯುವತಿಯರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಜಿಮ್ ಫಿಟ್ನೇಸ್, ಬ್ಯೂಟೀಷಿಯನ್ , ಚಾಟ್ಸ್ ತಯಾರಿಕೆ ತರಬೇತಿ ಶೀಬಿರವನ್ನು ದಿನಾಂಕ 19.09.2024 ರಿಂದ 09-10-2024 ರವರೆಗೆ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಜಿಮ್ ಫಿಟ್ನೆಸ್ ತರಬೇತಿ ಶಿಬಿರಗೆ ಭಾಗವಹಿಸಲು ಕನಿಷ್ಠ ವಿದ್ಯಾರ್ಹತೆ ದ್ವಿತೀಯ ಪಿ.ಯು.ಸಿ ಹೊಂದಿರಬೇಕು. 18 ರಿಂದ 40 ವರ್ಷದ ವಯೋಮಿತಿ ಹೊಂದಿರಬೇಕು. ಶ್ರೀ ಕಂಠೀರವ ಕ್ರೀಡಾಂಗಣ, ಬೆಂಗಳೂರು ಇಲ್ಲಿ ತರಬೇತಿ ಶಿಬಿರವು ನಡೆಯಲಿದೆ.
ಬ್ಯೂಟೇಷಿಯನ್ ಮತ್ತು ಚಾಟ್ಸ್ ತಯಾರಿಕೆ ತರಬೇತಿ ಶಿಬಿರಗೆ ಭಾಗವಹಿಸಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ (ಪಾಸ್ / ಪೇಲ್) ಹೊಂದಿರಬೇಕು. ಕನಿಷ್ಠ 18 ರಿಂದ ಗರಿಷ್ಟ 40 ವರ್ಷದ ವಯೋಮಿತಿ ಒಳಗಿರಬೇಕು. ಕೋರಮಂಗಲ ಒಳಾಂಗಣ ಕ್ರೀಡಾಂಗಣ, ಬೆಂಗಳೂರು ಇಲ್ಲಿ ತರಬೇತಿ ಶಿಬಿರವು ನಡೆಯಲಿದೆ.
ಆಸಕ್ತ ಯುವಕ –ಯುವತಿಯವರು ತಮ್ಮ ಜನ್ಮ ದಿನಾಂಕದ ದಾಖಲೆಗಳೊಂದಿಗೆ (ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ) ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು -01 ಇಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9731251411 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎಸ್.ಸಿ.ಎಸ್.ಪಿ- ಟಿ.ಎಸ್.ಪಿ ಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.