ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.
ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪುಕರಣಗಳ ದಂಡದ ಬಾಕಿ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.
ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪುಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿರುತ್ತದೆ. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.
ಪುಸ್ತಾವನೆಯಲ್ಲಿ, ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರು ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018- 19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪುಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪುಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಿದೆ.
ಈ ರಿಯಾಯಿತಿಯು ದಿನಾಂಕ:23.08.2025 ರಿಂದ 12.09.2025ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯು ಅನಧಿಕೃತ ಟಿಪ್ಪಣಿ ಸಂಖ್ಯೆ ಆಇ 52 ವೆಚ್ಚ-11 2023, ದಿನಾಂಕ:02.08.2025 ಮತ್ತು ದಿನಾಂಕ:16.08.2025 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ತಿದ್ದುಪಡಿ ವಿಧೇಯಕ 2025 ಅಂಗೀಕಾರ
BREAKING: AI ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಕೇಸ್: ಸಮೀರ್ ಎಂ.ಡಿಗೆ ಜಾಮೀನು ಮಂಜೂರು