ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ಮುಂದಾಗಿದ್ದು ಈಗಾಗಲೇ 4 ಸಾವಿರ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ವಿಧಾನಪರಿಷತ್ ನಲ್ಲಿ ತಿಳಿಸಿದರು.
ಪ್ರಶೋತ್ತರ ವೇಳೆ ಬಿಜೆಪಿಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಒದಗಿಸುವ ಛಾವಡಿಗಳು ಕಂದಾಯ ಇಲಾಖೆಯ ಸುಪರ್ಧಿಗೆ ಸೇರಿರುತ್ತವೆ; ಈ ಛಾವಡಿಗಳು ಶಿಥಿಲಗೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನರ್ ನಿರ್ಮಾಣ ಮಾಡಲು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ವಿಜಯಪುರ ಜಿಲ್ಲೆಯಲ್ಲಿ 82 ಗ್ರಾಮ ಛಾವಡಿಗಳು ಇರುತ್ತವೆ ಹಾಗೂ 126 ಗ್ರಾಮಗಳಲ್ಲಿ ಗ್ರಾಮ ಛಾವಡಿಗಳು ಇರುವುದಿಲ್ಲ; ಗ್ರಾಮ ಛಾವಡಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಲಾಗುವುದು ಎಂದರು.
ಗ್ರಾಮಪಂಚಾಯ್ತಿಯ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ದಾಖಲೆಗಳನ್ನು ಸಂರಕ್ಷಿಸಿಕೊಳ್ಳಲು ಅವರಿಗೆ ಕಪಾಟುಗಳನ್ನು ಒದಗಿಸಲಾಗಿದೆ ಹಾಗೂ ಲೇಖನ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಮತ್ತು ಪ್ರಯಾಣ ಭತ್ಯೆಗಳನ್ನು ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಕೇದಾರನಾಥ ಮತ್ತು ಹೇಮಕುಂಡ್ ಸಾಹಿಬ್ ರೋಪ್ ವೇ ಯೋಜನೆಗಳಿಗೆ ಮೋದಿ ಸಂಪುಟ ಅನುಮೋದನೆ
SSLC, ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ಸುಗಳಲ್ಲಿ ‘ಉಚಿತ ಸಂಚಾರ’ಕ್ಕೆ ಅವಕಾಶ