ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಇತ್ತೀಚಿಗೆ ನಡೆಸಿದ “ಪಿಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಯ ʼʼ ಫಲಿತಾಂಶವನ್ನು ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ರವಾನಿಸುವ ಮೂಲಕ ಹೊಸ ತಂತ್ರಜ್ಞಾನ ಪದ್ಧತಿಯನ್ನು ಅವಳಡಿಸಿಕೊಂಡಿದೆ.
ಪಿಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಯ ವಿಷಯವಾರು ವಿಭಾಗಗಳಲ್ಲಿ 3,913 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ ಎಲ್ಲ ವಿದ್ಯಾರ್ಥಿಗಳಿಗೆ ತಾವು ಈ ಮೊದಲೇ ನೋಂದಾಯಿಸಿದ್ದ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ವೇಳೆ ಅಂಕಪಟ್ಟಿಯ ಲಿಂಕ್ ಸಹ ನೀಡಲಾಗಿದ್ದು, ವಿದ್ಯಾರ್ಥಿಗಳು ಸುಲಭವಾಗಿ ಲಿಂಕ್ ಕ್ಲಿಕ್ ಮಾಡಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
” ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋರ್ಸ್ ವರ್ಕ್‌ನ ಫಲಿತಾಂಶವನ್ನು ಮೊಬೈಲ್ ಸಂದೇಶದ ಮೂಲಕ ಕಳುಹಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಹುಡುಕಾಟ ನಡೆಸುವ ಅವಶ್ಯಕತೆ ಇಲ್ಲ. ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪಿಎಚ್.ಡಿ ಮುಂದುವರಿಸಬಹುದಾಗಿದೆ” ಎಂದು ವಿಟಿಯು ಕುಲಸಚಿವ(ಮೌಲ್ಯಮಾಪನ) ಡಾ.ಯು.ಜೆ.ಉಜ್ವಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
SHOCKING: ಬೆಂಗಳೂರಿನಲ್ಲಿ ‘ಬೀದಿ ನಾಯಿ’ಗಳ ಸಂಖ್ಯೆ ಮೂರು ಪಟ್ಟು ಹೆಚ್ಚಳ
ಚಳಿಗಾಲದಲ್ಲಿಯೇ ಹೃದಯಾಘಾತ ಹೆಚ್ಚೇಕೆ? ಅಪಾಯಗಳನ್ನು ತಪ್ಪಿಸಲು ತಜ್ಞರು ನೀಡಿದ ಟಾಪ್ 5 ಸಲಹೆಗಳು!








