ಶಿವಮೊಗ್ಗ : ಮಹಿಳಾ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಬುಧವಾರ ಶಿವಮೊಗ್ಗದಲ್ಲಿ ಜಿಲ್ಲಾ ಒಕ್ಕಲಿಗ ಮಹಿಳಾ ವೇದಿಕೆ ಆಯೋಜಿಸಿದ್ದ ಮಲೆನಾಡು ಮೇಳವನ್ನು ಉದ್ಘಾಟಿಸಿ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು.
ಮಹಿಳಾ ಸಬಲೀಕರಣದ ಉದ್ದೇಶದಿಂದ ಮಹಿಳಾ ಅಭ್ಯರ್ಥಿಗಳಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.ಇದೇ ವೇಳೆ ಮಾತನಾಡಿದ ಸಚಿವರು ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರದಿಂದ 650 ಕೋಟಿ ರೂಪಾಯಿ ಮೀಸಲಿಡಲಾಗಿದೆ. ನಗರ ವ್ಯಾಪ್ತಿಯಲ್ಲಿ 3,000 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ಶಾಸಕ ಅರವಿಂದ ಲಿಂಬಾವಳಿಯನ್ನು ತನಿಖೆಗೆ ಒಳಪಡಿಸಲಾಗುತ್ತದೆ
ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ .ಇದೀಗ ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಶಾಸಕ ಅರವಿಂದ ಲಿಂಬಾವಳಿಯನ್ನು ತನಿಖೆಗೆ ಒಳಪಡಿಸಲಾಗುವುದು, ಆದರೆ ತಪ್ಪಿಲ್ಲದೇ ಅವರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಅರವಿಂದ ಲಿಂಬಾವಳಿ ಶಾಸಕರಾಗಲಿ, ಸಾಮಾನ್ಯ ವ್ಯಕ್ತಿಯಾಗಿರಲಿ, ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುತ್ತದೆ. ಇದರ ಹಿಂದೆ ಯಾವ ಒತ್ತಡ ಕೂಡ ಇಲ್ಲ ಎಂದರು. ಡೆತ್ ನೋಟ್ ನಲ್ಲಿ ಅವರ ಹೆಸರು ಇದ್ದ ಕಾರಣಕ್ಕೆ ಬಂಧಿಸಲು ಆಗುವುದಿಲ್ಲ.ಹಾಗಂತ ತಪ್ಪು ಮಾಡಿದವರನ್ನು ಬಂಧಿಸದೇ ಇರಲು ಆಗಲ್ಲ, ಈ ಬಗ್ಗೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
BIG NEWS: ‘ಮಾಜಿ ಸಚಿವ ಜನಾರ್ಧನ ರೆಡ್ಡಿ’ಗೆ ಮತ್ತೊಂದು ಸಂಕಷ್ಟ: ‘ಆಸ್ತಿ ಜಪ್ತಿ’ಗೆ ‘ಹೈಕೋರ್ಟ್’ ಮೆಟ್ಟಿಲೇರಿದ ಸಿಬಿಐ