ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊರಗುತ್ತಿಗೆಯ ಹುದ್ದೆ ನಿರೀಕ್ಷೆಯಲ್ಲಿದ್ದಂತ ಮಹಿಳಾ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

BIG NEWS: ‘ಶಾಲಾ ಶಿಕ್ಷಕರ ಹುದ್ದೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ‘ರಾಜ್ಯ ಸರ್ಕಾರ’ದಿಂದ ‘ವಯೋಮಿತಿ’ ಹೆಚ್ಚಳ | Teacher Recruitment

ಈ ಕುರಿತಂತೆ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳ್ನು ಹೊರಗುತ್ತಿಗೆ ಮೂಲಕ ಪಡೆಯಲಾಗುವ ಸೇವೆಗಳಲ್ಲಿ ಹಾಗೂ ಹುದ್ದೆಗಳಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

BIGG NEWS : ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ : ಕಾಂಗ್ರೆಸ್ ಗೆ ತಿರುಗೇಟು ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಇನ್ನೂ ರಾಜ್ಯ ಸರ್ಕಾರದ ಆದೇಶದಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯ, ಜಿಲ್ಲೆಗಳಲ್ಲಿ ಹೊರಗುತ್ತಿಗೆ ಮೂಲಕ ಪಡೆಯುವ ಟೆಂಡರ್ ಪ್ರಕಟಣೆಯಲ್ಲಿ ಮತ್ತು ಹೊರಗುತ್ತಿಗೆ ಏಜನ್ಸಿಗಳೊಂದಿಗೆ ಮಾಡಿಕೊಳ್ಳಲಾಗುವ ಒಪ್ಪಂದದಲ್ಲಿ ಶೇ.33ರಷ್ಟು ಹುದ್ದೆಗಳನ್ನು ಕಡ್ಡಾಯವಾಗಿ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ತಿಳಿಸಿದೆ.

Share.
Exit mobile version