ಬೆಂಗಳೂರು: 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಉದ್ಯೋಗಿನಿ ಯೋಜನೆಯಡಿ ಬ್ಯಾಂಕಿನಿAದ ಸಾಲ ಮಹಿಳಾ ಅಭಿವೃದ್ಧಿ ನಿಗಮದಿಂದ ಸಹಾಯಧನ, ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಡಿ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿದಾರರು ಹತ್ತಿರದ ಬಾಪೂಜಿಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು https://sevasindhu.karnataka.gov.in ನಲ್ಲಿ ಸೆಪ್ಟೆಂಬರ್ 21ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.