Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟಿಎಂಸಿಯಲ್ಲಿ ಬಂಡಾಯದ ಕಾವು: ಅಮಿತ್ ಶಾ ಭೇಟಿಗೆ ಮುಂದಾದ ಯೂಸುಫ್ ಪಠಾಣ್‌ಗೆ ತರಾಟೆ ತೆಗೆದುಕೊಂಡ ಮಹುವಾ ಮೊಯಿತ್ರಾ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

BIG UPDATE : `ಗೃಹಲಕ್ಷ್ಮಿ ಹಣ’ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ : ಇಲ್ಲದಿದ್ದರೆ ₹2,000 ಜಮೆ ಆಗಲ್ಲ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow57

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ಸೋಮವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಹಿತೈಷಿಗಳು ಹಾಗೂ ಅಭಿಮಾನಿಗಳು ನೂತನ ಸಚಿವರಿಗೆ ಪುಷ್ಪಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.

ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಚಿವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಕೇಂದ್ರ ಕಚೇರಿಗೆ ಭೇಟಿ ನೀಡಿದರು. ಅಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ವಾಯವ್ಯ ಸಾರಿಗೆ ನಿಗಮಗಳ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಕಾರ್ಯವೈಖರಿಯ ಬಗ್ಗೆ ಸಮಗ್ರ ಮಾಹಿತಿ ಪಡೆದರು.

ಶಕ್ತಿ ಯೋಜನೆ: ಪ್ರಯಾಣಿಕರ ಸಂಖ್ಯೆಯಲ್ಲಿ %40 ಹೆಚ್ಚಳ

ಸಭೆಯ ಬಳಿಕ ಮಾತನಾಡಿದ ಸಚಿವ ಬೈರತಿ ಸುರೇಶ್, “ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕನ್ನು ಹಸನಾಗಿಸಿವೆ. ಅದರಲ್ಲೂ ‘ಶಕ್ತಿ’ ಯೋಜನೆಯನ್ನು ಕೋಟ್ಯಂತರ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಯೋಜನೆ ಜಾರಿಗೆ ಬಂದ ನಂತರ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇಕಡಾ 40 ರಷ್ಟು ಗಣನೀಯ ಹೆಚ್ಚಳವಾಗಿದೆ,” ಎಂದು ಹರ್ಷ ವ್ಯಕ್ತಪಡಿಸಿದರು.

ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ವಿತರಣೆ; ಜಾಗತಿಕ ಟೆಂಡರ್‌ಗೆ ಸೂಚನೆ

ಶಕ್ತಿ ಯೋಜನೆಯನ್ನು ಇನ್ನಷ್ಟು ವ್ಯವಸ್ಥಿತ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದ ಮಹಿಳೆಯರಿಗೆ ಉಚಿತ ‘ಸ್ಮಾರ್ಟ್ ಕಾರ್ಡ್’ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಪ್ರಕಟಿಸಿದರು.

ಮಹಿಳೆಯರಿಗೆ ಉಚಿತ: ರಾಜ್ಯದ ಸುಮಾರು 3 ಕೋಟಿಗೂ ಅಧಿಕ ಮಹಿಳೆಯರಿಗೆ ಈ ಸ್ಮಾರ್ಟ್ ಕಾರ್ಡ್‌ಗಳನ್ನು ಉಚಿತವಾಗಿ ನೀಡಲಾಗುವುದು.

ಪುರುಷರಿಗೂ ಲಭ್ಯ: ಪುರುಷರು ಮೆಟ್ರೋ ಕಾರ್ಡ್ ಮಾದರಿಯಲ್ಲಿ ಹಣ ಪಾವತಿಸಿ ಈ ಕಾರ್ಡ್ ಪಡೆಯಬಹುದು ಹಾಗೂ ಹಣ ಖಾಲಿಯಾದ ನಂತರ ರೀಚಾರ್ಜ್ ಮಾಡಿಕೊಳ್ಳಬೇಕಾಗುತ್ತದೆ.

ಪೈಲಟ್ ಯೋಜನೆ: ಬೃಹತ್ ಪ್ರಮಾಣದಲ್ಲಿ ಕಾರ್ಡ್‌ಗಳ ಅಗತ್ಯವಿರುವುದರಿಂದ, ಇವುಗಳ ತಯಾರಿಕೆಗೆ ಜಾಗತಿಕ ಟೆಂಡರ್ ಕರೆಯಲು ಮತ್ತು ಶೀಘ್ರದಲ್ಲೇ ಪ್ರಾಯೋಗಿಕವಾಗಿ (ಪೈಲಟ್ ಪ್ರಾಜೆಕ್ಟ್) ವಿತರಣೆ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

5,000 ಹೊಸ ಬಸ್‌ಗಳ ಸೇರ್ಪಡೆ

ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಪ್ರಮುಖ ಕ್ರಮ ಕೈಗೊಳ್ಳಲಾಗುತ್ತಿದ್ದು, ಒಟ್ಟು 5,000 ಹೊಸ ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಚಿವರು ತಿಳಿಸಿದರು:

ರಾಜ್ಯ ಸರ್ಕಾರದ ಅನುದಾನ: 1,000 ಸಾಮಾನ್ಯ ಬಸ್‌ಗಳ ಖರೀದಿ.

ಕೇಂದ್ರ ಸರ್ಕಾರದ ಅನುದಾನ: 4,000 ಎಲೆಕ್ಟ್ರಿಕ್ (ಇ-ಬಸ್) ಬಸ್‌ಗಳ ಖರೀದಿ.

ಈ ಬಸ್‌ಗಳನ್ನು ಹಂತಹಂತವಾಗಿ ಖರೀದಿಸಿ ನಾಲ್ಕೂ ಸಾರಿಗೆ ನಿಗಮಗಳಿಗೆ ಸಮಾನವಾಗಿ ಹಂಚಿಕೆ ಮಾಡಲಾಗುವುದು.

ನಿರ್ಭಯ ಯೋಜನೆಗೆ ಆದ್ಯತೆ: ವಾಹನ ಟ್ರ್ಯಾಕಿಂಗ್ ಕಡ್ಡಾಯ

ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದ ಸಚಿವರು, ಖಾಸಗಿ ವಾಣಿಜ್ಯ ವಾಹನಗಳಾದ ಟ್ಯಾಕ್ಸಿ, ಕಾರುಗಳಲ್ಲಿ ‘ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಮ್’ (VLTS) ಅಳವಡಿಕೆಯನ್ನು ಚುರುಕುಗೊಳಿಸಲು ಆದೇಶಿಸಿದರು. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ವಾಹನಗಳಿಗೆ ಈ ವ್ಯವಸ್ಥೆ ಅಳವಡಿಸಲಾಗಿದ್ದು, ಇನ್ನುಳಿದ 4 ರಿಂದ 5 ಲಕ್ಷ ವಾಹನಗಳಿಗೆ ಮುಂದಿನ 3-4 ತಿಂಗಳೊಳಗೆ ಕಡ್ಡಾಯವಾಗಿ ಅಳವಡಿಸುವಂತೆ ಅಧಿಕಾರಿಗಳಿಗೆ ಗಡುವು ನೀಡಿದರು.

ಈ ಮಹತ್ವದ ಸಭೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಸಾರಿಗೆ ಆಯುಕ್ತ ಸೆಲ್ವಮಣಿ ಸೇರಿದಂತೆ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Good news for women in the state: Free `Shakti Smart Card' to be distributed soon for bus travel
Share. Facebook Twitter LinkedIn WhatsApp Email

Related Posts

BIG UPDATE : `ಗೃಹಲಕ್ಷ್ಮಿ ಹಣ’ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ : ಇಲ್ಲದಿದ್ದರೆ ₹2,000 ಜಮೆ ಆಗಲ್ಲ.!

1 Min Read

ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯಲ್ಲಿ 4000 ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ

2 Mins Read

BIG NEWS: ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸರ್ವರ್ ಸಮಸ್ಯೆ ಹಿನ್ನೆಲೆ ಬೆರಳಚ್ಚು ವಿನಾಯಿತಿ

1 Min Read
Recent News

ಟಿಎಂಸಿಯಲ್ಲಿ ಬಂಡಾಯದ ಕಾವು: ಅಮಿತ್ ಶಾ ಭೇಟಿಗೆ ಮುಂದಾದ ಯೂಸುಫ್ ಪಠಾಣ್‌ಗೆ ತರಾಟೆ ತೆಗೆದುಕೊಂಡ ಮಹುವಾ ಮೊಯಿತ್ರಾ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

BIG UPDATE : `ಗೃಹಲಕ್ಷ್ಮಿ ಹಣ’ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ : ಇಲ್ಲದಿದ್ದರೆ ₹2,000 ಜಮೆ ಆಗಲ್ಲ.!

BREAKING: ಇರಾನ್‌ನಲ್ಲಿ ಬೆಳ್ಳಂಬೆಳಿಗ್ಗೆ 4.9 ತೀವ್ರತೆಯ ಭೂಕಂಪ | Earthquake

State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ಸೋಮವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.…

BIG UPDATE : `ಗೃಹಲಕ್ಷ್ಮಿ ಹಣ’ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ : ಇಲ್ಲದಿದ್ದರೆ ₹2,000 ಜಮೆ ಆಗಲ್ಲ.!

ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯಲ್ಲಿ 4000 ಹುದ್ದೆಗಳ ಭರ್ತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ

BIG NEWS: ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಸರ್ವರ್ ಸಮಸ್ಯೆ ಹಿನ್ನೆಲೆ ಬೆರಳಚ್ಚು ವಿನಾಯಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.